ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

Spread the love

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ
 

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮ ಅವರನ್ನು ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ.

ಹಾಲಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಅಧಿಕಾರ ಅವಧಿ ಈ ತಿಂಗಳ 31ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ವಂದಿತಾ ಶರ್ಮ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1986ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್‌ ವರೆಗೆ ಅಧಿಕಾರವಧಿ ಇರಲಿದೆ.


Spread the love