ರಾತ್ರಿ ಕರ್ಫ್ಯೂ ನಿರ್ಧಾರ ವಾಪಾಸ್ ಪಡೆದ ರಾಜ್ಯ ಸರಕಾರ

Spread the love

ರಾತ್ರಿ ಕರ್ಫ್ಯೂ ನಿರ್ಧಾರ ವಾಪಾಸ್ ಪಡೆದ ರಾಜ್ಯ ಸರಕಾರ

ಬೆಂಗಳೂರು: ರೂಪಾಂತರ ಹೊಂದಿರುವ ಕೊರೊನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಡಿಸೆಂಬರ್ 24 ರಾತ್ರಿಯಿಂದ ಜನವರಿ 2 ರ ರಾತ್ರಿ ವರೆಗೆ ರಾಜ್ಯ ಸರಕಾರ ವಿಧಿಸಿದ್ದ ರಾತ್ರಿ ಕರ್ಫ್ಯೂ ವನ್ನು ವಾಪಾಸ್ ಪಡೆದಿದೆ.

ಕೋವಿಡ್ ತಡೆಗೆ ಹೇರಲು ನಿರ್ಧರಿಸಿದ್ದ ರಾತ್ರಿ ಕರ್ಫ್ಯೂ ಸರಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂಬಂತಹ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕರ್ಫ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು ಎಂದು ಸ್ಪಷ್ಟ ಪಡಿಸಿದ್ದಾರೆ.

ನಿಯಮ ಪಾಲಿಸಿ: ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಡಿ.24ರಿಂದ 2021ರ ಜನವರಿ 1ರವರೆಗೆ ರಾತ್ರಿ ಕರ್ಫ್ಯೂ ಹೇರಿಲು ಮುಂದಾಗಿದ್ದ ರಾಜ್ಯ ಸರಕಾರ ಸಾರ್ವಜನಿಕರ ಟೀಕೆ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಮೊದಲೆ ಹಿಂಪಡೆದಿದೆ.


Spread the love