ರಾಯಚೂರು ಜಡ್ಜ್ ವಿಚಾರದಲ್ಲಿ ಹೈಕೋರ್ಟ್ ಕ್ರಮಃ ಕಾಂಗ್ರೆಸ್ ವಿಶ್ವಾಸ

Spread the love

ರಾಯಚೂರು ಜಡ್ಜ್ ವಿಚಾರದಲ್ಲಿ ಹೈಕೋರ್ಟ್ ಕ್ರಮಃ ಕಾಂಗ್ರೆಸ್ ವಿಶ್ವಾಸ

ಮಂಗಳೂರುಃ ಗಣರಾಜ್ಯೋತ್ಸವ ಆಚರಣೆ ವೇಳೆ ರಾಯಚೂರು ನಗರದಲ್ಲಿ ಅಲ್ಲಿನ ನ್ಯಾಯಾಧೀಶರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.

ಗಣರಾಜ್ಯೋತ್ಸವ ಆಚರಣೆ ವೇಳೆ ಅಲ್ಲಿನ ನ್ಯಾಯಾಧೀಶರು ಡಾ.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವು ಗೊಳಿಸಿರುವುದು ಸಂವಿಧಾನಕ್ಕೆ ಮಾಡಿರುವ ಅಪಚಾರವಾಗಿದೆ. ಸಂಬಂಧಪಟ್ಟ ನ್ಯಾಯಾಧೀಶರಿಂದ ತಪ್ಪಾಗಿದೆ. ಇದಕ್ಕೆ ಸಂಬಂಧಿಸಿ ಹೈಕೋರ್ಟ್ ಸದ್ಯದಲ್ಲೇ ಸೂಕ್ತ ಕ್ರಮಕೈಗೊಳ್ಳುತ್ತದೆ ಎಂಬ ವಿಶ್ವಾಸ ತಮೆಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಶ್ವಾಸ ವ್ಯಕ್ತಪಡಿಸುತ್ತದೆ.

ನ್ಯಾಯಾಧೀಶರ ವರ್ತನೆ ಬಗ್ಗೆ ಸಾರ್ವಜನಿಕರಲ್ಲಿ ಬೇಸರ ಮತ್ತು ಆತಂಕ ಉಂಟಾಗಿದೆ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರು ನ್ಯಾಯಾಂಗಕ್ಕೆ ವಿಶೇಷ ಗೌರವ ನೀಡುತ್ತಿದ್ದಾರೆ. ನ್ಯಾಯಂಗ ಅಧಿಕಾರಿಯೊಬ್ಬ ನಮ್ಮ ಸಂವಿಧಾನ ಶಿಲ್ಪಿ ಬಗ್ಗೆ ಅಗೌರವ ತೋರಿಸಿರುವುದು ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ ರಾಷ್ಟ್ರೀಯ ಮಟ್ಟದ ರಾಜಕೀಯ ಪಕ್ಷವಾಗಿ ನಾವು ಪ್ರತಿಕ್ರಿಯೆ ನೀಡುವುದು ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಹೊಣೆಗಾರಿಕೆಯನ್ನು ರಾಜ್ಯ ಹೈಕೋರ್ಟು ಹೊಂದಿದೆ.

ಸುಪ್ರೀಂ ಕೋರ್ಟ್ ಕೂಡ ಈ ಘಟನೆಯನ್ನು ಅವಲೋಕಿಸುತ್ತಿದೆ ಎಂಬ ವಿಶ್ವಾಸ ತಮಗಿದೆ. ಅಂಬೇಡ್ಕರ್ ಅವರಿಗೆ ಅಗೌರವ ತೋರುವ ಘಟನೆಯು ಅತ್ಯಂತ ಗಂಭೀರ ಸ್ವರೂಪದಾಗಿದೆ. ಇದು ಕೇವಲ ಅಂಬೇಡ್ಕರ್ ಅವರ ಗೌರವದ ಪ್ರಶ್ನೆ ಮಾತ್ರವಲ್ಲದೆ, ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಈ ಕುರಿತಂತೆ ಮಾನ್ಯ ಹೈಕೋರ್ಟು ಶೀಘ್ರ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಆಗ್ರಹಿಸುತ್ತದೆ.


Spread the love