ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ

Spread the love

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೈಸೂರು ದಸರಾ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಸಿದ್ಧತೆಗಳು ಆರಂಭವಾದ ಬೆನ್ನಲ್ಲೇ ಉದ್ಘಾಟನೆ ಯಾರು ಮಾಡುತ್ತಾರೆ ಎಂಬ ಚರ್ಚೆಗಳು ಆರಂಭವಾಗಿತ್ತು. ಇದೀಗ ಭಾರತದ ಪ್ರಥಮ ಪ್ರಜೆ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟನೆ ಮಾಡುತ್ತಿರುವುದು ಖುಷಿ ತಂದಿದೆ.

ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್ 26 ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 5ವರೆಗೆ ನಡೆಯಲಿದೆ. ಸಂಪ್ರದಾಯದಂತೆ ಸೆ.26ರಂದು ಚಾಮುಂಡಿಬೆಟ್ಟದಲ್ಲಿ ದಸರಾಗೆ ವಿಧ್ಯುಕ್ತ ಚಾಲನೆ ನೀಡಲಾಗುತ್ತಿದೆ. ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ.

ಇನ್ನು ಮೈಸೂರು ದಸರಾಕ್ಕೆ ನೂತವಾಗಿ ರಾಷ್ಟ್ರಪತಿಯಾಗಿ ಆಯ್ಕೆಯಾದಂತಹ ದ್ರೌಪದಿ ಮುರ್ಮು ಅವರನ್ನು ಕರೆಯಿಸಬೇಕು ಎಂದು ಈ ಹಿಂದೆಯೇ ಸರ್ಕಾರ ವು ರಾಷ್ಟ್ರಪತಿಗೆ ಪತ್ರ ಬರೆಯಲಾಗಿತ್ತು. ಸರ್ಕಾರದ ಆಹ್ವಾನಕ್ಕೆ ಅವರು ಬರುವುದಾಗಿ ಒಪ್ಪಿಗೆ ಸೂಚಿಸಿ ರಾಷ್ಟ್ರಪತಿ ಭವನದಿಂದ ಶನಿವಾರ ಪತ್ರ ಬಂದಿದೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ದೇಶದ ಮೊದಲ ಪ್ರಜೆ ಕೈಯಿಂದ ಈ ಬಾರಿ ದಸರಾ ಉದ್ಘಾಟನೆಯಾಗುತ್ತದೆ ಎಂಬುದು ಬಹಳ ಖುಷಿ ನೀಡಿದೆ. ರಾಜ್ಯದಿಂದ ಎಲ್ಲರೂ ಪಾಲ್ಗೊಂಡಿರುತ್ತಾರೆ. ಮುಖ್ಯವಾಗಿ ದಸರಾ ಉದ್ಘಾಟನೆ ರಾಷ್ಟ್ರಪತಿ ಅವರಿಂದ ಆಗುತ್ತದೆ. ರಾಷ್ಟ್ರಪತಿಯವರು ದಸರಾ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಅಗತ್ಯ ಭದ್ರತೆ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ. 2021ರ ಮೈಸೂರು ದಸರಾವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಉದ್ಘಾಟಿಸಿದ್ದನ್ನು ಸ್ಮರಿಸಬಹುದಾಗಿದೆ.


Spread the love

Leave a Reply

Please enter your comment!
Please enter your name here