ರಾಷ್ಟ್ರೀಯವಾದಿ ಚಿಂತನೆಯ ಸರಕಾರ ರಚನೆಗೆ ಬಿಜೆಪಿ ಗೆಲ್ಲಿಸಿ :ಯಶ್ಪಾಲ್ ಸುವರ್ಣ

Spread the love

ರಾಷ್ಟ್ರೀಯವಾದಿ ಚಿಂತನೆಯ ಸರಕಾರ ರಚನೆಗೆ ಬಿಜೆಪಿ ಗೆಲ್ಲಿಸಿ :ಯಶ್ಪಾಲ್ ಸುವರ್ಣ

ರಾಷ್ಟ್ರೀಯವಾದಿ ಚಿಂತನೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕಟಿಬದ್ಧವಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯ ಬಿಜೆಪಿ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಶಕ್ತಿ ತುಂಬುವಂತೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

2024ರ ಲೋಕಸಭಾ ಚುನಾವಣೆಗೆ ಈ ಬಾರಿಯ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದ್ದು, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಂದರ್ಭದಲ್ಲಿ ಮತ್ತೊಮ್ಮೆ ಡಬಲ್ ಇಂಜಿನ್ ಸರಕಾರ ದೇಶ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ 3 ಬಾರಿ ನಗರ ಸಭಾ ಸದಸ್ಯರಾಗಿ ತಮ್ಮ ಕಾರ್ಯವೈಖರಿ ಹಾಗೂ ಬದ್ಧತೆಯ ಮೂಲಕ ಯುವ ನಾಯಕರಾಗಿ ಮೂಡಿಬಂದಿರುವ ಪಕ್ಷದ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಉಡುಪಿಯ ಜನತೆ ಪ್ರಚಂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಪಾಧ್ಯಕ್ಷರಾದ ಪ್ರಶಾಂತ್ ಕಾಂಚನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪಕ್ಷದ ಮುಖಂಡರಾದ ಶ್ರೀ ಸತೀಶ್ ನಾಯಕ್, ಶ್ರೀಮತಿ ಮಾಲತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love