ರಾಹುಲ್ ಗಾಂಧಿಯವರ ರೋಡ್ ಶೋ ಯಶಸ್ವಿಗೊಳಿಸಲು ಪ್ರಮೋದ್ ಮಧ್ವರಾಜ್ ಕರೆ

Spread the love

ರಾಹುಲ್ ಗಾಂಧಿಯವರ ರೋಡ್ ಶೋ ಯಶಸ್ವಿಗೊಳಿಸಲು ಪ್ರಮೋದ್ ಮಧ್ವರಾಜ್ ಕರೆ

ಉಡುಪಿ : ಉಡುಪಿ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರು ಪಡುಬಿದ್ರಿ, ಮುಲ್ಕಿ, ಸುರತ್ಕಲ್ ಇಲ್ಲಿ ನಡೆಯುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರ ರೋಡ್ ಶೋನಲ್ಲಿ ಮತ್ತು ಮಂಗಳೂರು ನೆಹರೂ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಹುಲ್ ಗಾಂಧಿಯವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಪ್ರಮೋದ್ ಮಧ್ವರಾಜ್‍ರವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಬೈಂದೂರು, ಕುಂದಾಪುರ, ಉಡುಪಿ ಮೊದಲಾದ ಕಡೆಗಳಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮವು ಸಮಯದ ಅಭಾವದಿಂದ ಮುಂದೂಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love