ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರಕಾರ ನಡೆಸುತ್ತಿರುವ ಹುನ್ನಾರ ಖಂಡಿಸಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

Spread the love

ರಾಹುಲ್ ಗಾಂಧಿ ವಿರುದ್ದ ಕೇಂದ್ರ ಸರಕಾರ ನಡೆಸುತ್ತಿರುವ ಹುನ್ನಾರ ಖಂಡಿಸಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

ಕುಂದಾಪುರ: ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅಸನರ್ಹತೆಗೊಳಿಸಿರುವುದನ್ನು ಖಂಡಿಸಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ವಂಡ್ಸೆಯ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುವುದು ಪಕ್ಷದ ಪ್ರಮುಖರು ಬುಧವಾರ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಯಾರೇ ಮಾತನಾಡಿದರು ಅಧಿಕಾರ ದುರ್ಬಳಕೆ ಮಾಡಿಕೊಂಡು ಪ್ರಶ್ನಿಸುವವರನ್ನು ಹತ್ತಿಕ್ಕುತ್ತಿರುವುದು ಖಂಡನೀಯ. ರಾಹುಲ್ ಅವರಿಗೆ ನೀಡಿರುವ ಶಿಕ್ಷೆ ಮತ್ತು ಅನರ್ಹತೆಯನ್ನು ಇಂದು ಇಡೀ ದೇಶವೇ ಖಂಡಿಸುತ್ತಿದೆ. ರಾಹುಲ್ ಗಾಂದಿಯವರನ್ನು ಈ ಮೂಲಕ ಹೆದರಿಸಿದರೆ ಇಡೀ ದೇಶದ ಕಾಂಗ್ರೆಸ್ ನಾಯಕರು ಹೆದರುತ್ತಾರೆ ಎನ್ನುವ ಭಾವನೆಯಲ್ಲಿ ತೇಲುತ್ತಿರುವ ಬಿಜೆಪಿ ಕೇಂದ್ರ ನಾಯಕರಿಗೆ ರಾಜ್ಯವ್ಯಾಪಿ ನಡೆಯುತ್ತಿರುವ ಇಂದಿನ ಮೌನ ಪ್ರತಿಭಟನೆ ಎಚ್ಚರಿಕೆಯ ಸಂದೇಶ ಎಂದರು.

ಮುಖಂಡ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡು ರಾಹುಲ್ ಅವರ ಜನಪ್ರಿಯತೆ ಇನ್ನಷ್ಟು ಹೆಚ್ಚುತ್ತಿರುವ ಹೊತ್ತಲ್ಲೇ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಭಾರತ್ ಜೋಡೋ ಯಾತ್ರೆಗೆ ಕಾಶ್ಮೀರದಿಂದ-ಕನ್ಯಾಕುಮಾರಿಯ ತನಕ ರಾಹುಲ್ ಅವರಿಗೆ ಸಿಕ್ಕಿದ ಅಭೂತಪೂರ್ವ ಜನಬೆಂಬಲ ಮುಂದೊಂದು ದಿನ ಕಾಂಗ್ರೆಸ್ ಈ ದೇಶದ ಚುಕ್ಕಾಣಿ ಹಿಡಿಯುವಲ್ಲಿ ಸಂದೇಹವೇ ಇಲ್ಲ ಎನ್ನುವ ವಾತವರಣವನ್ನು ಮನಗಂಡು ಅವರನ್ನು ಕುಗ್ಗಿಸಲು ಈ ರೀತಿಯ ಧಮನಕಾರಿ ನೀತಿಯನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರೊಂದಿಗೆ ನಾವೆಲ್ಲರೂ ಜೊತೆಯಾಗಿ ನಿಲ್ಲುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ವಂಡಬಳ್ಳಿ ಜಯರಾಮ್ ಶೆಟ್ಟಿ, ಉದಯ್ ಪೂಜಾರಿ, ಕಿರಣ್ ಕುಮಾರ್ ಹೆಗ್ಡೆ, ನಾಗಪ್ಪ ಕೊಠಾರಿ, ಜುಡಿತಾ ಮೆಂಡೋನ್ಸಾ, ಶ್ರೀನಿವಾಸ ಪೂಜಾರಿ, ಗಣೇಶ್ ಪ್ರಸಾದ್ ಶೆಟ್ಟಿ, ಸತೀಶ್, ಉಮೇಶ್ ಕೊಠಾರಿ, ಅರುಣ್ ಕುಮಾರ್ ಶೆಟ್ಟಿ, ಕರುಣಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


Spread the love