ರೆಂಜಾಳ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿ ಬಿಜೆಪಿಗೆ ಸೇರ್ಪಡೆ

Spread the love

ರೆಂಜಾಳ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿ ಬಿಜೆಪಿಗೆ ಸೇರ್ಪಡೆ

ರೆಂಜಾಳ ಗ್ರಾಮ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿ, ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ, ಸ್ಥಳೀಯ ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಮಲ್ಲಿಕಾ ಶೆಟ್ಟಿಯವರು ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವರಾದ ವಿ ಸುನಿಲ್ ಕುಮಾರ್ರವರು ಕಾರ್ಕಳ ಕ್ಷೇತ್ರದಾದ್ಯಂತ ಹಾಗೂ ರೆಂಜಾಳ ಗ್ರಾಮದಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳನ್ನು ಮತ್ತು ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಕ್ಷೇತ್ರಾಧ್ಯಕ್ಷರಾದ ಮಹಾವೀರ ಹೆಗ್ಡೆಯವರು ಬಿಜೆಪಿ ಪಕ್ಷದ ಶಾಲು ಮತ್ತು ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಕ್ಷೇತ್ರ ಪ್ರಭಾರಿಗಳಾದ ಬಾಹುಬಲಿ ಪ್ರಸಾದ್, ಶರತ್ ಶೆಟ್ಟಿ ರೆಂಜಾಳ, ರಮೇಶ್ ಶೆಟ್ಟಿ, ಉಮೇಶ್ ಶೆಟ್ಟಿ, ದೀಪಿಕಾಶೆಟ್ಟಿ, ವೃಷಭರಾಜ್ ಜೈನ್, ಯೋಗೀಶ್ ದೇವಾಡಿಗ, ರಾಜೇಶ್ ಶೆಟ್ಟಿ, ಸತೀಶ್, ಪದ್ಮರಾಜ್ ಶೆಟ್ಟಿ, ಸುನಂದಾ, ಪುಷ್ಪಾ ಗೌಡ ಮೊದಲಾದವರು ಉಪಸ್ಥಿತರಿದ್ದರು.


Spread the love