
Spread the love
ರೈತ ಮೋರ್ಚಾದಿಂದ ವನ ಮಹೋತ್ಸವ
ಮಡಿಕೇರಿ: ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಮಾಂದಲಪಟ್ಟಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಪ್ರವಾಸಿ ತಾಣದ ವಿವಿದೆಡೆ ಔಷಧಿಯ ಗುಣವುಳ್ಳ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ಮಾತನಾಡಿ, ರೈತ ಮೋರ್ಚಾ ವತಿಯಿಂದ ಕೃಷಿಕರಿಗೆ ಪೂರಕವಾದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅದರ ಜತೆಗೆ ಪರಿಸರ ಸಂರಕ್ಷಣೆ, ಅರಣ್ಯ ಪ್ರದೇಶದ ಉಳಿವಿನ ಉದ್ದೇಶದಿಂದ ವನಮಹೋತ್ಸವ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ಕಾಳಪ್ಪ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ಬಿ.ಸಿ. ನವೀನ್, ರಾಜ್ಯ ಸಮಿತಿ ಸದಸ್ಯೆ ಯಮುನಾ ಚಂಗಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.
Spread the love