
ರೌಡಿಶೀಟರ್ ಕೋಡಿಕೆರೆ ಲೋಕೇಶ್ ಗಡಿಪಾರು
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್‌ನನ್ನು ಮಂಗಳೂರು ಪೊಲೀಸರು ಬಂಧಿಸಿ ಮತ್ತೆ ಗಡಿಪಾರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣೆಯ ಹಿನ್ನೆಲೆಯಲ್ಲೇ ಈತನನ್ನು ಈ ಹಿಂದೆ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿ ಈತ ಮತ್ತೆ ಜಿಲ್ಲೆಗೆ ಪ್ರವೇಶಿಸಿದ್ದ ಎಂದು ಹೇಳಲಾಗುತ್ತಿದೆ.
ಗಡಿಪಾರು ಮಾಡಲಾದ ವ್ಯಕ್ತಿಗಳ ಮೇಲೆ ನಿಗಾವಹಿಸುವ ಸಮಯ ಲೋಕೇಶ್ @ ಲೋಕು ಎಂಬಾತನು ಗಡಿಪಾರು ಮಾಡಲಾದ ಶಿವಮೊಗ್ಗ ಜಿಲ್ಲೆಯಲ್ಲಿ ಇಲ್ಲದೇ ಇರುವುದು ಕಂಡುಬಂದಿದ್ದು, ಬಳಿಕ ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ಲೋಕೇಶ್ @ ಲೋಕು ಎಂಬಾತನ ಚಲನವಲಗಳನ್ನು ಪರಿಶೀಲಿಸಲಾಗಿ, ಸದ್ರಿ ವ್ಯಕ್ತಿಯು ಬೆಳ್ತಂಗಡಿ ಪರಿಸರದಲ್ಲಿ ಇರುವುದು ಕಂಡುಬಂದಿದ್ದು, ಆತನು ಗಡಿಪಾರು ಆದೇಶವನ್ನು ಉಲ್ಲಂಘಿಸಿದ ಕಾರಣ ಪೊಲೀಸ್ ಅಧಿಕಾರಿಗಳ ತಂಡವು ಆತನನ್ನು ವಶಕ್ಕೆ ಪಡೆದು, ಉಪ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ಮಂಗಳೂರು ನಗರ ಇವರ ಮುಂದೆ ದಿನಾಂಕ 05-05-2023 ರಂದು ಹಾಜರುಪಡಿಸಿದ್ದು, ಆತನನ್ನು ಬೇರೆ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿರುತ್ತದೆ.