ಲಂಚಕ್ಕೆ ಬೇಡಿಕೆ ಇಟ್ಟ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Spread the love

ಲಂಚಕ್ಕೆ ಬೇಡಿಕೆ ಇಟ್ಟ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಮಂಗಳೂರು: ಕಾರು ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿ ಕಾರನ್ನು ಠಾಣೆಯಿಂದ ಬಿಡಿಸಿಕೊಳ್ಳಲು ಲಂಚಕ್ಕೆ ಬೇಡಿಕೆಯಿಟ್ಟ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲೀಂ ಎಂಬವರನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ.‌

ನಂತೂರು ಸರ್ಕಲ್‌ನಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ, ಕಾರು, ಕಾರಿನ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ತಂದು ಕೊಡುವಂತೆ ಸೂಚಿಸಿದ್ದು, ಅದರಂತೆ ಕಾರಿನ ಮಾಲಕರು ಎಲ್ಲವನ್ನೂ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಬಳಿಕ ತನ್ನ ಕಾರನ್ನು ಪೊಲೀಸ್ ಠಾಣೆಯಿಂದ ಬಿಡಿಸಿಕೊಳ್ಳಲು ಹೋದಾಗ ಹೆಡ್‌ ಕಾನ್ಸ್‌ಟೇಬಲ್ ತಸ್ಲಿಂ 50,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ಈ ಸಂಬಂಧ ಕಾರಿನ ಮಾಲಕರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಕದ್ರಿ ಠಾಣೆಯ ಇಬ್ಬರು‌ ಹೆಡ್‌ಕಾನ್ಸ್‌ಟೇಬಲ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ತಸ್ಲಿಂನನ್ನು ವಶಕ್ಕೆ ಪಡೆದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು (ಪ್ರಭಾರ), ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಶ್ರೀ ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಶ್ರೀ ಚಂದ್ರಶೇಖರ್ ಕೆ.ಎನ್ ರವರು ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.


Spread the love
Subscribe
Notify of

0 Comments
Inline Feedbacks
View all comments