
Spread the love
ಲಂಚ ಪ್ರಕರಣ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ
ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ವೇಳೆ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಕ್ಷಣಮಾತ್ರದಲ್ಲಿ ಅಲ್ಲಿಂದ ತೆರಳಿ ನಾಪತ್ತೆಯಾಗಿದ್ದರು. ಅವರನ್ನು ಬಂಧಿಸುವುದಕ್ಕಾಗಿ ಲೋಕಾಯುಕ್ತ ಪೊಲೀಸರ ತಂಡ ಅವರ ನಿವಾಸಕ್ಕೆ ತೆರಳಿತ್ತು. ಆದರೆ, ಅಷ್ಟರಲ್ಲೇ ಅವರು ಬೆಂಗಳೂರಿಗೆ ಕಾರಿನಲ್ಲಿ ತೆರಳಿದ್ದಾರೆ ಎನ್ನಲಾಗಿತ್ತು.
ಇದೀಗ ಕೊನೆಗೂ ಅವರನ್ನು ಬಂಧಿಸುವಲ್ಲಿ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿದ್ದಾರೆ. ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.
Spread the love