ಲಕ್ಷ್ಮೀನಗರ ಯೋಗೀಶ್ ಪೂಜಾರಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

Spread the love

ಲಕ್ಷ್ಮೀನಗರ ಯೋಗೀಶ್ ಪೂಜಾರಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಉಡುಪಿ: ಲಕ್ಷ್ಮೀನಗರದಲ್ಲಿ ನಡೆದ ಯುವಕ ಯೋಗಿಶ್ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೈಲಕೆರೆ ನಿವಾಸಿ ಅನೂಪ್ ಕುಂದರ್ (38) ಎಂದು ಗುರುತಿಸಲಾಗಿದೆ.

ಜುಲೈ 6 ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬುಧವಾರ 4 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈಗ ಅನೂಪ್ ಕುಂದರ್ ಬಂಧನದೊಂದಿಗೆ ಒಟ್ಟು ಬಂಧಿತರ ಸಂಖ್ಯೆ 5 ಕ್ಕೇ ಏರಿಕೆಯಾಗಿದೆ. ಬಂಧಿತನಿಂದ ಬೈಕ್ ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಎಸ್ ಪಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಉಡುಪಿ ಡಿವೈಎಸ್ಪಿ ಜೈಶಂಕರ್ ಅವರ ಮಾರ್ಗದರ್ಶನದಲ್ಲಿ ಉಡುಪಿ ಸಿಪಿಐ ಮಂಜುನಾಥ್, ಮಲ್ಪೆ ಪಿಎಸ್ ಐ ತಿಮ್ಮೇಶ್ ಮತ್ತು ಉಡುಪಿ ಪಿಎಸ್ ಐ ಸಕ್ತೀವೇಲು ಮತ್ತವರ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ


Spread the love