
ಲಕ್ಷ್ಮೀ ಹೆಬ್ಬಾಳ್ಕರ್ ನಿಂದನೆ ಪ್ರಕರಣ -ರಮೇಶ್ ಜಾರಕಿಹೊಳಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಮನವಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಧ್ಯಮಗಳ ಮುಂದೆ ಕಾಂಗ್ರೆಸ್ ನಾಯಕಿ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕುರಿತು ಅಶ್ಲೀಲವಾಗಿ ಮಾತನಾಡಿ ನಿಂದಿಸಿರುವುದನ್ನು ಖಂಡಿಸಿರುವ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಪೋಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಳೆ ಅವರ ನೇತೃತ್ವದಲ್ಲಿ ಸಲ್ಲಿಸಲಾದ ಮನವಿಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸ್ವೀಕರಿಸಿ, ಮನವಿಯನ್ನು ಶೀಘ್ರದಲ್ಲಿಯೇ ಸಂಬಂಧಪಟ್ಟವರಿಗೆ ಕಳುಹಿಸಿಕೊಡುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಮೇಶ್ ಕಾಂಚನ್, ಪ್ರಧಾನ ಕಾರ್ಯದರ್ಶಿ ಶ್ರೀ ಕುಶಲ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮೀನಾಕ್ಷಿ ಮಾಧವ ಬನ್ನಂಜೆ,ಆಶಾ ಚಂದ್ರಶೇಖರ್,ಜೊತೆ ಕಾರ್ಯದರ್ಶಿ ಜಯಶ್ರೀ ಶೇಟ್, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಮಮತಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗಾಯತ್ರಿ,ಪ್ರಮೀಳಾ ಸುವರ್ಣ, ಶ್ರೀಮತಿ ಸಾಧನಾ ಕಿಣಿ, ಶ್ರೀ ನಾರಾಯಣ ಕುಂದರ್, ಯತೀಶ್ ಕರ್ಕೇರ,ವನಗರಸಭಾ ಸದಸ್ಯರಾದ ಶ್ರೀ ವಿಜಯ ಪೂಜಾರಿ,ಸಂಜಯ್ ಆಚಾರ್ಯ,ಸತೀಶ್ ಕೊಡವೂರು,ಸತೀಶ್ ಕುಮಾರ್ ಮಂಚಿ, ತಾರಾನಾಥ್,ನವೀನ್ ಶೆಟ್ಟಿ,ಡೀವನ್,ಸಾಯಿರಾಜ್, ಸುಕೇಶ್ ಕುಂದರ್, ಮುಂತಾದವರು ಉಪಸ್ಥಿತರಿದ್ದರು