ಲಾಕ್‌ಡೌನ್: ಕಂಬದಕೋಣೆ ಗ್ರಾಪಂ ಪ್ರದೇಶಕ್ಕೆ ಬೈಂದೂರು ಶಾಸಕ  ಸುಕುಮಾರ್ ಶೆಟ್ಟಿ ಭೇಟಿ

Spread the love

ಲಾಕ್‌ಡೌನ್: ಕಂಬದಕೋಣೆ ಗ್ರಾಪಂ ಪ್ರದೇಶಕ್ಕೆ ಬೈಂದೂರು ಶಾಸಕ  ಸುಕುಮಾರ್ ಶೆಟ್ಟಿ ಭೇಟಿ

ಕುಂದಾಪುರ: ಸಂಪೂರ್ಣ ಲಾಕ್‌ಡೌನ್ ಮಾಡಿರುವ ಕಂಬದಕೋಣೆ ಗ್ರಾಮ ಪಂಚಾಯತ್ ಪ್ರದೇಶಕ್ಕೆ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳನ್ನು ಜಿಲ್ಲಾಧಿಕಾರಿಯವರ ಆದೇಶದಂತೆ ಬುಧವಾರದಿಂದ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಹಾಗೂ ಲಾಕ್‌ಡೌನ್ ಸಮಯದಲ್ಲಿ ಜನರಿಗೆ ತೊಂದರೆಯಾಗದAತೆ ಗ್ರಾಪಂ ಕ್ರಮಕೈಗೊಳ್ಳಬೇಕು. ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್ ಕೈಗೊಂಡ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಗ್ರಾಪಂ ಅಧ್ಯಕ್ಷ ಸುಕೇಶ ಶೆಟ್ಟಿ, ಸದಸ್ಯರಾದ ರಾಜೇಶ ದೇವಾಡಿಗ, ಸತೀಶ ದೇವಾಡಿಗ, ರಮೇಶ ದೇವಾಡಿಗ, ಗಣೇಶ ದೇವಾಡಿಗ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಪಾರ್ವತಿ, ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸಂಗೀತಾ, ಪಂಚಾಯತ್ ಸಿಬ್ಬಂದಿ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.


Spread the love