ಲಾಕ್ ಡೌನ್ ವೇಳೆ ದಕ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಎಂದಿನಂತೆ ಲಭ್ಯ

Spread the love

ಲಾಕ್ ಡೌನ್ ವೇಳೆ ದಕ ಜಿಲ್ಲೆಯಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಎಂದಿನಂತೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯ ಭಾನುವಾರ ಲಾಕ್ ಡೌನ್ ವೇಳೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಎಂದಿನಂತೆ ಲಭ್ಯವಾಗಲಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕೆಲವು ದೃಶ್ಯ ಮಾಧ್ಯಮಗಳಲ್ಲಿ ಅಗತ್ಯ ವಸ್ತುಗಳು ದೊರೆಯುವುದಿಲ್ಲವೆಂಬುದಾಗಿ ಪ್ರಸಾರ ಮಾಡುತ್ತಿರುವುದು ಕಂಡುಬಂದಿರುತ್ತದೆ. ಜಿಲ್ಲಾಡಳಿತ ಹೊರಡಿಸಿರುವ ಆದೇಶದ ಮಾರ್ಗಸೂಚಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ವಿನಾಯಿತಿ ನೀಡಿರುವ ಹಿನ್ನೆಲೆಯಲ್ಲಿ, ಎಂದಿನಂತೆ ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ 8.00 ರಿಂದ 11.00 ಗಂಟೆಯವರೆಗೆ ಅಗತ್ಯ ಸೇವೆಯಲ್ಲೊಂದಾದ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಾಕಷ್ಟು ಪ್ರಮಾಣದಲ್ಲಿ ಡೀಲರ್ ಕೇಂದ್ರಗಳಲ್ಲಿ ದೊರೆಯುತ್ತವೆ. ಅದರಂತೆ ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಗ್ರಾಹಕರು ಎಂದಿನಂತೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಖರೀದಿಸಬಹುದಾಗಿರುತ್ತದೆಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.


Spread the love