ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಂಗ ಬಂಧನಕ್ಕೆ ಮುರುಘಾ ಶರಣರು

Spread the love

ಲೈಂಗಿಕ ಕಿರುಕುಳ ಪ್ರಕರಣ: ನ್ಯಾಯಾಂಗ ಬಂಧನಕ್ಕೆ ಮುರುಘಾ ಶರಣರು
 

ಚಿತ್ರದುರ್ಗ: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಧೀಶರು ಸೋಮವಾರ ನ್ಯಾಯಾಂಗ ವಶಕ್ಕೆ ಒಪ್ಪಿಸಿದರು.

ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದರಿಂದ ಸೋಮವಾರ ಬೆಳಿಗ್ಗೆ 11ಕ್ಕೆ ಅವರನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ನ್ಯಾಯಾಂಗ ಬಂಧನಕ್ಕೆ ನೀಡಿದರು.

ಸೆ.1ರಂದು ಸೆರೆಯಾಗಿದ್ದ ಶರಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಪ್ರಕರಣದ ತನಿಖೆಯ ದೃಷ್ಟಿಯಿಂದ ಸೆ.2ರಂದು ತನಿಖಾಧಿಕಾರಿಗಳು ಪೊಲೀಸ್ ವಶಕ್ಕೆ ಪಡೆದಿದ್ದರು.

ಸೆ.3 ರಂದು ಅವರನ್ನು ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರೋಪಿಯು ಮುರುಘಾ ಮಠದಲ್ಲಿ ತಂಗುತ್ತಿದ್ದ ಕೊಠಡಿಯ ಮಹಜರು ಪ್ರಕ್ರಿಯೆ ಸೆ.4ರಂದು ನಡೆದಿತ್ತು ಈ ಮಹಜರು ವರದಿಯನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.


Spread the love