ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಚೂರಿ ಇರಿತ; ಸ್ಥಿತಿ ಗಂಭೀರ; ಆರೋಪಿ ಬಂಧನ

Spread the love

ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿಗೆ ಚೂರಿ ಇರಿತ; ಸ್ಥಿತಿ ಗಂಭೀರ; ಆರೋಪಿ ಬಂಧನ

ಬೆಂಗಳೂರು: ಲೋಕಾಯುಕ್ತ ನ್ಯಾ. ಪಿ. ವಿಶ್ವನಾಥ ಶೆಟ್ಟಿ ಅವರನ್ನು ವಿಚಾರಣೆಗೆ ಬಂದಿದ್ದ ವ್ಯಕ್ತಿಯೊಬ್ಬ ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.

ಬುಧವಾರ ಲೋಕಾಯುಕ್ತ ಕಚೇರಿಗೆ ವಿಚಾರಣೆಗಾಗಿ ಬಂದಿದ್ದ ತೇಜಸ್‌ ಶರ್ಮಾ ಎಂಬ ಯುವಕ ಲೋಕಾಯುಕ್ತ ನ್ಯಾ.ಪಿ. ವಿಶ್ವನಾಥ ಶೆಟ್ಟಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ.

ನ್ಯಾಯಮೂರ್ತಿ ವಿಶ್ವನಾಥ್​ ಶೆಟ್ಟಿ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಆರೋಪಿ ತೇಜಸ್‌ನನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಕಳೆದ ವರ್ಷ ಲೋಕಾಯುಕ್ತ ಸ್ಥಾನಕ್ಕೆ ನೇಮಕಗೊಂಡಿದ್ದರು.


Spread the love