ಲೋಕಾಯುಕ್ತ ಪೊಲೀಸರಿಂದ ಕಡತ ಪರಿಶೀಲನೆ:  ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ವಿರುದ್ಧ ಕ್ರಮ 

Spread the love

ಲೋಕಾಯುಕ್ತ ಪೊಲೀಸರಿಂದ ಕಡತ ಪರಿಶೀಲನೆ:  ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ವಿರುದ್ಧ ಕ್ರಮ 

ಮಂಗಳೂರು: ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧಿಕಾರಿಗಳು ಡಿ. 13 ಮತ್ತು 14ರಂದು ಬೈಕಂಪಾಡಿಯಲ್ಲಿರುವ ಪ್ರಾದೇಶಿಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದು ಹಲವಾರು ನ್ಯೂನತೆಗಳು ಕಂಡುಬಂದಿವೆ.

ನೋಂದಣಿ, ನವೀಕರಣಕ್ಕೆ ಬಂದ ಅರ್ಜಿಗಳನ್ನು ಮತ್ತು ಸಕಾಲದ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳನ್ನು ಇತ್ಯರ್ಥ ಗೊಳಿಸದೆ ವಿಳಂಬಿಸಿರುವುದು ಕಂಡುಬಂದಿದೆ. ಕೆಲವುಕಾರ್ಖಾನೆಗಳು ನಿಯಮ ಮೀರಿ ಷರತ್ತು ಉಲ್ಲಂಘಿಸಿ ಕಾರ್ಯಾಚರಣೆ ಮಾಡುತ್ತಿದ್ದು ಅಂತಹ ಕಾರ್ಖಾನೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಕಂಡುಬಂದಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರು ತಿಳಿಸಿದ್ದಾರೆ.


Spread the love