ವಳಚ್ಚಿಲ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ವಳಚ್ಚಿಲ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ನಗರದ ಹೊರವಲಯದ ವಳಚ್ಚಿಲ್ ಪದವು ಶ್ರೀನಿವಾಸ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಭವಿಸಿದೆ.

ಮೃತಳನ್ನು ಚಿಕ್ಕಮಗಳೂರು ನಿವಾಸಿ ಸುಚೇತನ (21) ಎಂದು ಗುರುತಿಸಲಾಗಿದೆ. ಇವರು ಬಿಇ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಯಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ಇದುವರೆಗೆ ತಿಳಿದುಬಂದಿಲ್ಲ. ಮಂಗಳೂರು ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love