ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ – ಸುಟ್ಟು ಕರಕಲಾದ ಎರಡು ಅಂಗಡಿಗಳು

Spread the love

ವಿಟ್ಲದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ – ಸುಟ್ಟು ಕರಕಲಾದ ಎರಡು ಅಂಗಡಿಗಳು

ಮಂಗಳೂರು: ಬೆಳ್ಳಂಬೆಳಗ್ಗೆ ದಕ ಜಿಲ್ಲೆಯ ವಿಟ್ಲದಲ್ಲಿ ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಂಗಳವಾರ ಸಂಭವಿಸಿದೆ.

ವಿಟ್ಲದಲ್ಲಿರುವ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪಕ್ಕದಲ್ಲಿರುವ ಕೆ ಜೆ ಟವರ್ಸ್ ಕಟ್ಟಡದಲ್ಲಿನ ಎಂ ಪಿ ಹಾರ್ಡ್ ವೇರ ಮತ್ತು ಪೈಂಟಿಂಗ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಪೈಟಿಂಗ್ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಗಮನಿಸಿದ ಸ್ಥಳೀಯರು ಅಂಗಡಿಯ ಮಾಲಿಕರಿಗೆ ಮಾಹಿತಿ ನೀಡಿದ್ದು ನಂತರ ಪಕ್ಕದಲ್ಲಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿದ್ದು ಇದರಿಂದ ಎರಡೂ ಅಂಗಡಿಗಳೂ ಸುಟ್ಟು ಹೋಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದು ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love