ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Spread the love

ವಿಟ್ಲ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 4ರ ಮಹಿಳಾ ಮಂಡಲ ಅಂಗನವಾಡಿ, ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 2 ರ ಚಂದಳಿಕೆ ಅಂಗನವಾಡಿ, ವಿಟ್ಲ ಪಟ್ಟಣ ಪಂಚಾಯತ್ ವಾರ್ಡ್ 3 ರ ಉಕ್ಕುಡ ಅಂಗನವಾಡಿ, ಮಂಚಿ ಗ್ರಾಮ ಪಂಚಾಯತ್‍ನ ಕುಕ್ಕಾಜೆ-1 ಅಂಗನವಾಡಿ, ವೀರಕಂಭ ಗ್ರಾಮ ಪಂಚಾಯತ್‍ನ ಮಂಗಿಲಪದವು ಅಂಗನವಾಡಿ, ಕೊಳ್ನಾಡು ಗ್ರಾಮ ಪಂಚಾಯತ್‍ನ ಸೇರ್ಕಳ ಅಂಗನವಾಡಿ, ಅಳಿಕೆ ಗ್ರಾಮ ಪಂಚಾಯತ್‍ನ ಭೀಮಾರ ಅಂಗನವಾಡಿ, ಕೆದಿಲ ಗ್ರಾಮ ಪಂಚಾಯತ್‍ನ ಗಡಿಯಾರ ಅಂಗನವಾಡಿ, ಕನ್ಯಾನ ಗ್ರಾಮ ಪಂಚಾಯತ್‍ನ ಕಣಿಯೂರು ಅಂಗನವಾಡಿ ಕೇಂದ್ರದ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಕಂ ಕ್ರಷ್ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕಂ ಕ್ರಷ್ ಕಾರ್ಯಕರ್ತೆಯರ ಮಾಸಿಕ ಗೌರವಧನ ರೂ.5500 ಹಾಗೂ ಕಂ ಕ್ರಷ್ ಸಹಾಯಕಿಯರ ಮಾಸಿಕ ಗೌರವಧನ ರೂ.3000 ಆಗಿರುತ್ತದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನ. ಸೂಕ್ತ ದಾಖಲೆಗಳೊಂದಿಗೆ ಅದೇ ಅಂಗನವಾಡಿ ಸರ್ವೇ ವ್ಯಾಪ್ತಿಯ 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಕಂ ಕ್ರಷ್‍ನ ಕಾರ್ಯಕರ್ತೆ ಹುದ್ದೆಗೆ ಕರ್ನಾಟಕ ರಾಜ್ಯದ ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದವರನ್ನು ಪರಿಗಣಿಸಲಾಗುತ್ತದೆ. ಕಂ ಕ್ರಷ್ ಕಾರ್ಯಕರ್ತೆ ಹಾಗೂ ಕಂ ಕ್ರಷ್ ಸಹಾಯಕಿ ಹುದ್ದೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗನವಾಡಿ ಕೇಂದ್ರವಿರುವ ವಾರ್ಡಿನಲ್ಲಿಯೇ ವಾಸ್ತವ್ಯವಿರಬೇಕು. 6 ತಿಂಗಳೊಳಗೆ ಪಡೆದಿರುವ ತಹಶೀಲ್ದಾರರ ವಾಸ್ತವ್ಯ ದೃಢಪತ್ರ ಹೊಂದಿರಬೇಕು. ಹಾಗೂ ಕಂಕ್ರಷ್ ಸಹಾಯಕಿ ಹುದ್ದೆಗೆ ಕರ್ನಾಟಕ ರಾಜ್ಯದ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ 7ನೇ ತರಗತಿಯಲ್ಲಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರನ್ನು ಪರಿಗಣಿಸಲಾಗುತ್ತದೆ. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಜೆರಾಕ್ಸ್ ಪ್ರತಿಗಳಿಗೆ ಗೆಜೆಟ್‍ಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು. ಜನ್ಮದಿನಾಂಕಕ್ಕೆ ಸಂಬಂಧಿಸಿದಂತೆ ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಯಾವುದಾದರೂ ಗುರುತು ಚೀಟಿ ಸಲ್ಲಿಸಬೇಕು(ಆಧಾರ್ ಕಾರ್ಡ್, ವೋಟರ್ ಐಡಿ, ಇತ್ಯಾದಿ). ಹಾಗೂ ಸರ್ವೆ ವ್ಯಾಪ್ತಿಯಲ್ಲಿ ವಾಸವಾಗಿರುವ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯಿಂದ ದೃಢೀಕರಣವವನ್ನು ಲಗತ್ತಿಸಬೇಕು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿಯ ಕುಲಾಲ ರಜತ ಭವನ ಕಟ್ಟಡದಲ್ಲಿರುವ ವಿಟ್ಲ ಶಿಶು ಅಭಿವೃದ್ಧಿ ಯೋಜನಾ ಕಚೇರಿಯನ್ನು (ದೂರವಾಣಿ ಸಂಖ್ಯೆ: 08255-238080) ಸಂಪರ್ಕಿಸಬಹುದು ಎಂದು ವಿಟ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments