ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯನ ಬಂಧನ

Spread the love

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವೈದ್ಯನ ಬಂಧನ

ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ವೈದ್ಯನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ‌.

ಬಂಧಿತ ವ್ಯಕ್ತಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾಯಕ್ ಎಂದು ಗುರುತಿಸಲಾಗಿದೆ.

ಡಾ.ಅನುಷ ನಾಯ್ಕ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯನ್ನು ಪುಸಲಾಯಿಸಿ ಆತನ ಕಾರಿನಲ್ಲಿ ಮಾಣಿ ಗ್ರಾಮದ ಮನೆಯ ಕಡೆಗೆ ಕರೆದುಕೊಂಡು ಹೋಗಿ ಬಾಲಕಿಯ ಮೈಯನ್ನು ಮುಟ್ಟಿ ಚುಂಬಿಸಿ ಲೈಂಗಿಕ ತೊಂದರೆ ನೀಡಿರುತ್ತಾರೆ. ಕರಣ ತನಿಖೆ ನಡೆಸಿದ ವಿಟ್ಲ ಪೊಲೀಸರು ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಡಾ. ಅನುಷ್ ನಾಯ್ ಎಂಬಾತನನ್ನು ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿಂದ ದಸ್ತಗಿರಿ ಮಾಡಿ ಕಾನೂನು ಕ್ರಮ ಜರುಗಿಸಿದ್ದಾರೆ.


Spread the love