ವಿಟ್ಲ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಚಂದಳಿಕೆ ಸಿಪಿಸಿಆರ್ಐ ಬಳಿ ರವಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಸಿಪಿಸಿಆರ್ಐ ನಿವಾಸಿ, ಇಂಟೀರಿಯರ್ ಡಿಸೈನ್ ಇಂಜಿನಿಯರ್ ಕಿಶನ್ ಭಟ್ (55) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.