ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣ- ಆಹಾರ ಪ್ರಯೋಗಾಲಯಕ್ಕೆ ರವಾನೆ

Spread the love

ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣ- ಆಹಾರ ಪ್ರಯೋಗಾಲಯಕ್ಕೆ ರವಾನೆ

ಮಂಗಳೂರು:  ನಗರದ ಖಾಸಗಿ ಆಸ್ಪತ್ರೆಯ ಅಧೀನದಲ್ಲಿರುವ ಹಾಸ್ಟೆಲ್ ನಲ್ಲಿ ಸೋಮವಾರ ನಡೆದ ವಿಷಾಹಾರ ಸೇವನೆ ಪ್ರಕರಣದ ಅಸ್ವಸ್ಥ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಹಾರದ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, City group of Institutions ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಶಕ್ತಿನಗರದ ವ್ಯಾಪ್ತಿಯಲ್ಲಿದ್ದು, ಒಟ್ಟು 782 ವಿದ್ಯಾರ್ಥಿಗಳು ವಸತಿಗೃಹದಲ್ಲಿ ವಾಸ್ತವ್ಯವಿರುತ್ತಾರೆ. ದಿನಾಂಕ 06-02-2023 ರಂದು City group of Institutions ಇಲ್ಲಿ ವಾಂತಿ ಬೇಧಿ ಪ್ರಕರಣಗಳು ಪತ್ತೆಯಾಗಿರುವ ಬಗ್ಗೆ ಸಾಯಂಕಾಲ 4:30 ಗಂಟೆಗೆ ಜಿಲ್ಲಾ ಸರ್ವೇಕ್ಷಣಾ ಘಟಕಕ್ಕೆ ತಿಳಿದು ಬಂದಿದ್ದು, ಬಿ.ಎಸ್‌.ಸಿ ಹಾಗೂ ಜನರಲ್ ನರ್ಸಿಂಗ್‌ ಕೆಲವು ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಪ್ರಕರಣಗಳು ಕಂಡು ಬಂದ ಕೂಡಲೇ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರು ಹಾಗೂ ಸಿಬ್ಬಂಧಿ ಭೇಟಿ ನೀಡಿ, ವಿದ್ಯಾರ್ಥಿನಿಯರನ್ನು ಪರೀಕ್ಷೆಗೊಳಪಡಿಸಿರುತ್ತಾರೆ. ಆ ಸಂದರ್ಭದಲ್ಲಿ ಆಸ್ಪತ್ರೆಗೆ ದಾಖಲು ಮಾಡುವಂತಹ ಯಾವುದೇ ಪ್ರಕರಣಗಳು ಕಂಡುಬಂದಿರುವುದಿಲ್ಲ.

ಅದೇ ದಿನ ರಾತ್ರಿ ಸುಮಾರು 6:00 ಗಂಟೆಗೆ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಕಂಡು ಬಂದಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವ ವಿಚಾರ ತಿಳಿದು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ತಂಡ ವಿವಿಧ ಆಸತ್ರೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ನೇರ ಸಂವಾದ ಹಾಗೂ ವಿವಿಧ ಆಸ್ಪತ್ರೆಯ ತಜ್ಞ ವೈದ್ಯರೊಂದಿಗೆ ನಿಕಟ ಸಂಪರ್ಕ ಹೊಂದಿ ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಲಾಯಿತು.

ದಾಖಲಾದ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಯದಿಂದ ಇರುವುದು ಗಮನಕ್ಕೆ ಬಂದಿದ್ದು, ಕೆಲವು ವಿದ್ಯಾರ್ಥಿಗಳು mild dehydration ನಿಂದ ಬಳಲುತ್ತಿದ್ದು ಆಸ್ಪತ್ರೆಗೆ ಭೇಟಿ ನೀಡಿದ ನಂತರ, ವಿದ್ಯಾರ್ಥಿಗಳು ವಾಸಿಸುತ್ತಿರುವ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ  ಆಸ್ಪತ್ರೆಯ ವಿಶೇಷ ವೈದ್ಯಕೀಯ ತಂಡವನ್ನು ಆಂಬುಲೆನ್ಸ್ ಸಹಿತ ಕಳುಹಿಸಿ, ಉಳಿದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ದ.ಕ ಮಂಗಳೂರು, ಆಹಾರ ಸುರಕ್ಷತಾಧಿಕಾರಿ, ದ.ಕ. ಜಿಲ್ಲಾ ಸರ್ವೇಕ್ಷಣಾಧಿಕಾರಿ, ದ.ಕ, ಪ್ರಾಂಶುಪಾಲರು, ಜಿಲ್ಲಾ ತರಬೇತಿ, ಕೇಂದ್ರ ಸುರತ್ಕಲ್, ತಾಲೂಕು ಆರೋಗ್ಯಾಧಿಕಾರಿ ಮಂಗಳೂರು ಇವರುಗಳ ಜೊತೆ ಜಂಟಿಯಾಗಿ ಆಹಾರ ತಯಾರಿಸುವ ಅಡುಗೆ ಕೋಣೆಗೆ ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲಿಸಿ, ಅಡುಗೆ ಮಾಡಿ ಇಟ್ಟಿದ್ದ ವಿವಿಧ ಆಹಾರ ಮಾದರಿಗಳನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಯಿತು, ನೀರಿನ ಮಾದರಿ ಹಾಗೂ ಶೀತಲೀಕರಣ ಪೆಟ್ಟಿಗೆಯಲ್ಲಿಟ್ಟ ಮಾಂಸ ಹಾಗೂ ಇತರೆ ಆಹಾರ ವಸ್ತುಗಳನ್ನು ಸಂಗ್ರಹಿಸಲಾಯಿತು. ಆರೋಗ್ಯ ಇಲಾಖೆಯಯಿಂದ ಮುಂದಿನ ಸೂಚನೆ ಬರುವವರೆಗೂ ಅಡುಗೆ ಮನೆಯಲ್ಲಿ ಆಹಾರ ತಯಾರಿಸದಂತೆ ಹಾಗೂ ಮಕ್ಕಳಿಗೆ ಶುದ್ಧ ಆಹಾರ ಹಾಗೂ ಸುರಕ್ಷಿತ ಕುಡಿಯುವ ನೀರನ್ನು ಪೂರೈಸುವಂತೆ ಸೂಚಿಸಲಾಯಿತು.

ದಿನಾಂಕ 07-12-2023 ರಂದು ಪೂರ್ವಾಹ್ನ 7:00 ಗಂಟೆಗೆ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ಪ್ರಾಂಶುಪಾಲರು, ಜಿಲ್ಲಾ ತರಬೇತಿ ಕೇಂದ್ರ ಸುರತ್ಕಲ್ ಇವರು 3 ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅದರಲ್ಲಿ 13 ವಿದ್ಯಾರ್ಥಿನಿಯರಲ್ಲಿ ಹೊಟ್ಟೆ ನೋವು ಮತ್ತು ಜ್ವರದ ಲಕ್ಷಣಗಳು ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರುತ್ತದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿದಕ, ತಾಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ಆರೋಗ್ಯ ಮೇಲ್ವಿಚಾರಣಾಧಿಕಾರಿಗಳ ತಂಡ City group of Institutions ಶಕ್ತಿನಗರ, ಮಂಗಳೂರು ಇಲ್ಲಿಗೆ ಭೇಟಿ ನೀಡಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಕಂಡುಬಂದಿರುವ ವಾಂತಿ ಬೇಧಿ ಪ್ರಕರಣಗಳ ಆರೋಗ್ಯ ಮೇಲ್ವಿಚಾರಣೆಯನ್ನು ನಡೆಸಲಾಯಿತು. ಶಿಕ್ಷಣ ಸಂಸ್ಥೆಯಲ್ಲಿಯೇ ಆರೋಗ್ಯ ಇಲಾಖೆಯಿಂದ ವಿಶೇಷ ವೈದ್ಯಕೀಯ ತಂಡವನ್ನು ತಾತ್ಕಾಲಿಕ ನೆಲೆಯಲ್ಲಿ ದಿನದ 24 ಗಂಟೆ ಚಿಕಿತ್ಸೆಯನ್ನು ನೀಡಲು ಸ್ಥಳದಲ್ಲೇ ನಿಯೋಜಿಸಲಾಗಿರುತ್ತದೆ. ಒಟ್ಟು 10 ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಹೊಸದಾಗಿ ಸೌಮ್ಯಪ್ರಮಾಣದ ವಾಂತಿ ಬೇಧಿ ಕಂಡು ಬಂದಂತಹ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ನೆಲೆಯಲ್ಲಿ ತೆರೆಯಲಾದ ಚಿಕಿತ್ಸಾಲಯದಲ್ಲಿ ವೈದ್ಯರ ತಂಡ, ಅರೆವೈದ್ಯಕೀಯ ತಂಡದಿಂದ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

ವಸತಿ ನಿಲಯದ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುವ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಲಾಗಿದ್ದು, ಆಹಾರ ಸಾಮಾಗ್ರಿ ದಾಸಾನು ಕೊಠಡಿಯಲ್ಲಿ ಆಹಾರ ಸಾಮಾಗ್ರಿಗಳನ್ನು ಕಟ್ಟಡದ ಗೋಡೆಗೆ ಹೊಂದಿಕೊಂಡಿರುವಂತೆ, ಹಾಗೂ ನೇರವಾಗಿ ನೆಲಹಾಸಿನಲ್ಲಿ ಸಂಗ್ರಹಿಸಿರುವುದು ಕಂಡು ಬಂದಿರುತ್ತದೆ, ದವಸಧಾನ್ಯ ತರಕಾರಿ ಸೇರಿದಂತೆ, ಆಹಾರ ಸಾಮಾಗ್ರಿಗಳನ್ನು ಗೋಡೆಯಿಂದ ಮತ್ತು ನೆಲದಿಂದ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಸಂಗ್ರಹಿಸಲು ತಿಳಿಸಿಲಾಗಿರುತ್ತದೆ. ಆಹಾರ ಸಾಮಾಗ್ರಿಗಳ ಅವಧಿ ಮೀರುವ ದಿನಾಂಕವನ್ನು ಪರಿಶೀಲಿಸಲಾಯಿತು. ಸಂಸ್ಥೆಯ ಆವರಣದಲ್ಲಿರುವ ಬಾವಿ ಪರಿಶೀಲಿಸಿ, ಬಾವಿಗೆ ನೆಟ್ ಅಳವಡಿಸಲು ತಿಳಿಸಲಾಗಿರುತ್ತದೆ. ಈಗಾಗಲೇ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾಲಕಾಲಕ್ಕೆ ಯೋಗಕ್ಷೇಮವನ್ನು ವಿಚಾರಿಸಲಾಗುತ್ತಿದೆ.

ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ವಿಶೇಷ ತಜ್ಞರ ತಂಡವನ್ನು ವಸತಿ ನಿಲಯಕ್ಕೆ ಕಳುಹಿಸಿ ಮಲದ ಮಾದರಿ, ರಕ್ತದ ಮಾದರಿ, ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿವಿಧ ಆಯಾಮದಿಂದ ಸೋಂಕಿಗೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ.


Spread the love