ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ- ಎಸ್ಪಿ ಅಕ್ಷಯ್ ಹಾಕೆ

Spread the love

ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ- ಎಸ್ಪಿ ಅಕ್ಷಯ್ ಹಾಕೆ

ಉಡುಪಿ: ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣದ ಜೊತೆ ಜೊತೆಗೆ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಜೀವನ ಕೌಶಲ್ಯ ಬೆಳೆಸಿಕೊಂಡಲ್ಲಿ ಮಾತ್ರ ತಮ್ಮ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಮಚ್ವೀಂದ್ರ ಹೇಳಿದರು.

ಅವರು ಶುಕ್ರವಾರ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇದರ ವತಿಯಿಂದ ಎಸ್ ಎಸ್ ಎಲ್ ಸಿ ,ಪಿಯುಸಿ,ಹಾಗೂ ಸ್ನಾತಕೋತ್ತರ 1200 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು 25 ಲಕ್ಷ ರೂಪಾಯಿ ವೆಚ್ಚದ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡಿನ ಹೆಮ್ಮೆಯ “ಕಾಪು ಪಿಲಿಕೋಲ” ದೈವ ನರ್ತಕ ಗುಡ್ಡ ಪಾಣಾರ ರವರಿಗೆ ಸನ್ಮಾನ ಕಾರ್ಯಕ್ರಮ, ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಹಯೋಗದೊಂದಿಗೆ ಆಯೋಜಿಸಿದ್ದ ದ.ಕ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನವನ್ನು ಎಚ್ಚರಿಕೆಯಿಂದ ಬಳಸಿ ಸ್ವಸಾಮರ್ಥ್ಯ ಗುರುತಿಸಿಕೊಂಡು ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯ ಬೇಕು. ಇಂದು ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಪಡೆದ ಪ್ರತಿಭಾ ಪುರಸ್ಕಾರ ಮುಂದಿನ ಸಾಧನೆಗೆ ಪ್ರೇರಣೆಯಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಜಿ ಶಂಕರ್ ಬ್ಯಾಂಕಿನ‌ ಲಾಭದ ಪಾಲನ್ನು ಸಮಾಜಕ್ಕೆ ನೀಡುವ ಮೂಲಕ ಹಿಂದುಳಿದವರು‌ ಮುಂದಕ್ಕೆ ಬರಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಮಹಾಲಕ್ಷ್ಮೀ ಬ್ಯಾಂಕ್ ಮಾಡುತ್ತಿರುವ‌ಸಾಮಾಜಿಕ ಸೇವೆ ನಿಜಕ್ಕೂ ಪ್ರಶಂಸನಾರ್ಹ. ದೈವನರ್ತಕರಿಗೆ ಈಗಾಗಲೇ ಮಾಶಾಸನ ಘೋಷಣೆಯಾಗಿದ್ದು ಇದರೊಂದಿಗೆ ಅವರಿಗೆ ಹೆಚ್ಚಿನ ಆರ್ಥಿಕ ಭದ್ರತೆಯನ್ನು ಸರ್ಕಾರ ನೀಡಬೇಕು” ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಶಿಕ್ಷಣ ನಿಧಿಗೆ ಬ್ಯಾಂಕಿನ‌ ವತಿಯಿಂದ ಎಂಟು ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು.

2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡಿ ದೈವ ನರ್ತಕ ಗುಡ್ಡಪಾಣಾರರಿಗೆ ಈ ವೇಳೆ ಸನ್ಮಾನಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಜಯ ಸಿ ಕೋಟ್ಯಾನ್, ಡಾ|ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಪ್ರಾಂಶುಪಾಲರಾದ ಭಾಸ್ಕರ್ ಶೆಟ್ಟಿ, ಉಜ್ವಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಅಜಯ್ ಪಿ ಶೆಟ್ಟಿ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here