ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ದೂರು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳಕ್ಕೆ ಯತ್ನ : ದೂರು

ಬಂಟ್ವಾಳ: ಬಂಟ್ವಾಳದ ಕಾಲೇಜೊಂದರ ವಿದ್ಯಾರ್ಥಿನಿಯಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಲೇಜಿನಲ್ಲಿ ಗುತ್ತಿಗೆಯಾಧಾರದಲ್ಲಿ ಕೂಲಿ ಕೆಲಸ ನಿರ್ವಹಿಸುವ ಉಜಿರೆಯ ರೋಹಿತ್ ಎಂಬಾತನನ್ನು ಪ್ರಕರಣ ಸಂಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಪ್ರತಿದಿನ ಕಾಲೇಜಿನ ಮೆಟ್ಟಲಿನಲ್ಲಿ ನಿಂತು ವಿದ್ಯಾರ್ಥಿನಿಯರಿಗೆ ಚುಡಾಯಿಸುತ್ತಿದ್ದು, ಶನಿವಾರವು ವಿದ್ಯಾರ್ಥಿನಿಯೊಬ್ಬಳ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಲೆತ್ನಿಸಿದಾಗ ಅಲ್ಲಿದ್ದ ವಿದ್ಯಾರ್ಥಿನಿಯರೆಲ್ಲರು ಜಮಾಯಿಸಿ ಈತನಿಗೆ ಥಳಿಸಲು ಮುಂದಾದಾಗ ಅಲ್ಲಿದ್ದ ಕಾಲೇಜಿನ ಸಿಬ್ಬಂದಿ ಮಧ್ಯ ಪ್ರವೇಶಿಸಿದರೆನ್ನಲಾಗಿದೆ.

ಈ ಸಂದರ್ಭ ರೋಹಿತ್ ನ ಅಸಭ್ಯ ವರ್ತನೆಯಿಂದ ಆಕ್ರೋಶಿತರಾದ ವಿದ್ಯಾರ್ಥಿನಿಯರು ಪೊಲೀಸ್ ಠಾಣೆಗೆ ತೆರಳಿದ ಆತನ ವಿರುದ್ಧ ದೂರು ದಾಖಲಿಸಿದಲ್ಲದೆ ಬಂಧನಕ್ಕೂ ಪಟ್ಟು ಹಿಡಿದು ಕುಳಿತ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ರೋಹಿತ್ ನನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.