ವಿದ್ಯಾರ್ಥಿನಿ ಮೇಲೆ   ಸಾಮೂಹಿಕ ಅತ್ಯಾಚಾರ ಎಸ್.ಎಫ್.ಐ. ಖಂಡನೆ

152

ವಿದ್ಯಾರ್ಥಿನಿ ಮೇಲೆ   ಸಾಮೂಹಿಕ ಅತ್ಯಾಚಾರ ಎಸ್.ಎಫ್.ಐ. ಖಂಡನೆ

ಪುತ್ತೂರಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡಿಸುತ್ತದೆ. ಗಾಂಜಾ ಸೇವನೆಯಿಂದಾಗಿ ಸರಣಿಯಾಗಿ ಕುಕೃತ್ಯಗಳು ನಡೆಯುತ್ತಿದೆ. ಇತ್ತೀಚೆಗೆ ದೇರಳಕಟ್ಟೆಯಲ್ಲಿ ನಡೆದ ಕೊಲೆ ಯತ್ನದಲ್ಲಿಯೂ ಅಪರಾಧಿ ಅಮಲು ಪದಾರ್ಥ ಸೇವನೆ ಮಾಡಿ ಅಂತಹ ಪೈಶ್ಯಾಚಿಕ ಕೃತ್ಯ ನಡೆಸಿದ್ದಾನೆ. ಪುತ್ತೂರಿನಲ್ಲಿ ನಡೆದ ಅತ್ಯಾಚಾರÀ ಘಟನೆಯಲ್ಲೂ ಅತ್ಯಾಚಾರಿಗಳು ಅಮಲು ಪದಾರ್ಥ ಸೇವನೆ ಮಾಡಿ ಜಿಲ್ಲೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ.

ಇತ್ತೀಚೆಗೆ ಬೆಳ್ತಂಗಡಿಯ ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲೂ ಅತ್ಯಾಚಾರಿಗಳು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ. ಯಾವುದೇ ಶಕ್ತಿಗಳ ಒತ್ತಡಕ್ಕೆ ಒಳಗಾಗದೆ ಅತ್ಯಾಚಾರವನ್ನು ಎಸಗಿದ ಆರೋಪಿಗಳಿಗೆ ಶೀಘ್ರ ಶಿಕ್ಷೆ ನೀಡಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಬೇಕು ಮತ್ತು ಅಮಲು ಪದಾರ್ಥಗಳ ಸಾಗಾಟವನ್ನು ತಡೆಗಟ್ಟಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಶಿಕ್ಷೆ ಆಗದೆ ಇದ್ದಲ್ಲಿ ಜಿಲ್ಲಾಯಾದ್ಯಾಂತ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮಾಧುರಿ ಬೋಳಾರ್  ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Please enter your comment!
Please enter your name here