ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಕರ ಪ್ರಭಾವ ವಿಶೇಷವಾದುದು – ವಿಜಯ್ ಎಸ್ ಪೂಜಾರಿ

Spread the love

ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಕರ ಪ್ರಭಾವ ವಿಶೇಷವಾದುದು – ವಿಜಯ್ ಎಸ್ ಪೂಜಾರಿ

ಕುಂದಾಪುರ: ವಿದ್ಯಾರ್ಥಿ ಜೀವನದುದ್ದಕ್ಕೂ ಉತ್ತಮ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ರಾಷ್ಟ್ರ ನಿರ್ಮಾಣದಲ್ಲೂ ಶಿಕ್ಷಕರ ಸೇವೆ ಅನನ್ಯವಾದುದು. ಪಠ್ಯದೊಂದಿಗೆ ನೈತಿಕ ಶಿಕ್ಷಣವನ್ನು ಕಲಿಸುವ ಜೊತೆಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳುವ ಮೂಲಕ ಓರ್ವ ಶಿಕ್ಷಕ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿಯೂ ಪ್ರಭಾವವನ್ನು ಬೀರುತ್ತಾರೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ್ ಎಸ್ ಪೂಜಾರಿ ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ, ಶಿಕ್ಷಕರ ದಿನಾಚರಣೆ ಸಮಿತಿಯ ಜಂಟಿ ಆಶ್ರಯದಲ್ಲಿ ಸೋಮವಾರ ಮಧ್ಯಾಹ್ನ ಇಲ್ಲಿನ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ದಿನಕರ ಆರ್.ಶೆಟ್ಟಿ ಉಪನ್ಯಾಸ ನೀಡಿದರು.

ಕುಂದಾಪುರ ತಾಪಂ ಇಒ ಮಹೇಶ್ ಕುಮಾರ ಹೊಳ್ಳ, ಯುವ ಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಜಯಶೀಲ ಶೆಟ್ಟಿ, ಕುಂದಾಪುರ ಗಾಣಿಗ ಸೇವಾ ಸಂಘ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಶಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಘಟಕ ಅಧ್ಯಕ್ಷ ಗಣೇಶ ಕುಮಾರ ಶೆಟ್ಟಿ, ತಾಲೂಕು ಅನುದಾನಿತ ಶಿಕ್ಷಕರ ಸಂಘ ಅಧ್ಯಕ್ಷ ನಾರಾಯಣ ಶೆಟ್ಟಿ, ಪ್ರೌಢ ಶಾಲಾ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕುಂದಾಪುರ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘ ಅಧ್ಯಕ್ಷೆ ಜ್ಯೋತಿ, ರಾಜ್ಯ ಪರಿಷತ್ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಸದಸ್ಯ ಜಯಶೀಲ ಶೆಟ್ಟಿ, ಟೀಚರ್ ಕೋಆಪರೇಟಿವ್ ಬ್ಯಾಂಕ್ ನಿರ್ದೇಶಕ ಕಿಶನ್‍ರಾಜ್ ಶೆಟ್ಟಿ ಇದ್ದರು.

ಶಿಕ್ಷಕ ವೃತ್ತಿಯಿಂದ ನಿವೃತ್ತರಾದ 43 ಶಿಕ್ಷಕರನ್ನು ಗೌರವಿಸಲಾಯಿತು. ಹೆಮ್ಮಾಡಿ ರಾಜು ಪೂಜಾರಿ ನಿರ್ದೇಶನದಲ್ಲಿ ಕುಂದಾಪುರ ವಲಯ ಶಿಕ್ಷಕರಿಂದ ಯಕ್ಷಸಿರಿ ಯಕ್ಷಗಾನ ನೃತ್ಯ ವೈಭವ ನಡೆಯಿತು.


Spread the love

Leave a Reply

Please enter your comment!
Please enter your name here