ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Spread the love

ವಿಧಾನಪರಿಷತ್‌ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಇದೇ ಜೂನ್ 13ಕ್ಕೆ ಮತದಾನ ನಡೆಯಲಿದ್ದು, ಎಂಎಲ್‌ಸಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 03 ಕೊನೆಯ ದಿನವಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಎನ್.ಎಸ್ ಬೋಸರಾಜು ವಸಂತ ಕುಮಾರ್

ಡಾ. ಯತಿಂದ್ರ ಸಿದ್ದರಾಮಯ್ಯ
ಕೆ. ಗೋವಿಂದ ರಾಜು
ಐವಾನ್ ಡಿಸೋಜ
ಬಿಲ್ಕಿಸ್ ಬಾನೂ
ಜಗದೇವ್ ಗುತ್ತೇದಾ‌ರ್

ಅವರನ್ನು ಕಣಕ್ಕೆ ಇಳಿಸಿದೆ. ಜಗದೀಶ್ ಶೆಟ್ಟರ್ ಅವರಿಂದ ತೆರವಾದ ಸ್ಥಾನಕ್ಕೆ ಬಾದರ್ಲಿ ಅವರ ಹೆಸರನ್ನು ಘೋಷಿಸಿದೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಹೊಂದಿರುವ ಸಂಖ್ಯಾಬಲದ ಆಧಾರದಲ್ಲಿ 7 ಪರಿಷತ್‌ ಸದಸ್ಯ ಸ್ಥಾನವನ್ನು ಗೆಲ್ಲಬಹುದಾಗಿದೆ. ಹೀಗಾಗಿ ವಿಧಾನಪರಿಷತ್‌ ಚುನಾವಣೆಗೆ 7 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.


Spread the love

Leave a Reply