ವಿಧಾನಪರಿಷತ್ ಚುನಾವಣೆ: ಮಧ್ಯ ಮಾರಾಟ ಮತ್ತು ಸಾಗಾಣಿಕೆ ನಿಷೇಧ

Spread the love

ವಿಧಾನಪರಿಷತ್ ಚುನಾವಣೆ: ಮಧ್ಯ ಮಾರಾಟ ಮತ್ತು ಸಾಗಾಣಿಕೆ ನಿಷೇಧ

ಮಂಗಳೂರು: ರಾಜ್ಯ ವಿಧಾನ ಪರಿಷತ್ತಿಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ದ್ವೈವಾರ್ಷಿಕ ಚುನಾವಣೆ ಇದೇ ಡಿ.10 ರಂದು ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಮದ್ಯ ಮುಕ್ತ ದಿನವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

ಅವರು ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮ 1967 ರ 10 (ಬಿ) ರ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಡಿ. 09 ರ ಮಧ್ಯರಾತ್ರಿ 12 ಗಂಟೆಯಿಂದ ಡಿ. 10 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿವಿಧ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ಯ ಮುಕ್ತ ದಿನಗಳೆಂದು ಘೋಷಿಸಿದ್ದಾರೆ.


Spread the love