ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರಶೆಟ್ಟಿ ರಾಜೀನಾಮೆ

Spread the love

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರಶೆಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪಚಂದ್ರಶೆಟ್ಟಿ ಗುರುವಾರ ರಾಜೀನಾಮೆ ನೀಡಿದ್ದಾರೆ.

113 ವರ್ಷಗಳ ರಾಜ್ಯದ ಮೇಲ್ಮನೆಗೆ ಭವ್ಯ ಇತಿಹಾಸವಿದೆ. ಈ ಸದನದ ಘನತೆ ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯ. ಕಳೆದ 37 ವರ್ಷಗಳಿಂದ ನಾನು ಸಾರ್ವಜನಿಕ ಬದುಕಿನಲ್ಲಿದ್ದೇನೆ. ಆದರೆ ಈಗ ಮೌಲ್ಯಗಳು ಕಡಿಮೆಯಾಗುತ್ತಿದೆ. ವಿಧಾನಪರಿಷತ್​ ಸಭಾಪತಿ ಪೀಠ ಸಿಕ್ಕಿದ್ದು ನನ್ನ ಸೌಭಾಗ್ಯ. 2 ವರ್ಷಗಳಿಂದ ಸಭಾಪತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಪರಿಷತ್​ ಸಭಾಪತಿ ಪ್ರತಾಪಚಂದ್ರಶೆಟ್ಟಿ ವಿದಾಯ ಭಾಷಣ ಮಾಡಿದ್ದಾರೆ.

2018ರ ಡಿ.12ರಿಂದ ಪ್ರತಾಪಚಂದ್ರ ಶೆಟ್ಟಿ ಸಭಾಪತಿಯಾಗಿದ್ದರು. ಇವರು ವಿಧಾನಪರಿಷತ್​ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರತಾಪಚಂದ್ರಶೆಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಬಿಜೆಪಿಯ ಅವಿಶ್ವಾಸ ನಿರ್ಣಯವನ್ನು ಜೆಡಿಎಸ್ ಬೆಂಬಲಿಸಿತ್ತು. ಹೀಗಾಗಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ನಿನ್ನೆ ನಡೆದ ಸಿಎಲ್​ಪಿ ಸಭೆಯಲ್ಲೇ ಅವರು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದರು. ಪಕ್ಷಕ್ಕೆ ಮುಜುಗರವಾಗುವುದನ್ನು ತಪ್ಪಿಸಲು ರಾಜೀನಾಮೆ ನೀಡುತ್ತಿರುವುದಾಗಿ ಅವರು ಸಿಎಲ್​ಪಿ ಸಭೆಯಲ್ಲಿ ಹೇಳಿದ್ದರು ಎನ್ನಲಾಗಿದೆ.


Spread the love