ವಿಪ್ ಉಲ್ಲಂಘನೆ : ಕಾಪು ಪುರಸಭಾ ಸದಸ್ಯ ಕಾಂಗ್ರೆಸ್ ಪಕ್ಷದಿಂದ ಸುರೇಶ್ ದೇವಾಡಿಗ ಅಮಾನತು

Spread the love

ವಿಪ್ ಉಲ್ಲಂಘನೆ : ಕಾಪು ಪುರಸಭಾ ಸದಸ್ಯ ಕಾಂಗ್ರೆಸ್ ಪಕ್ಷದಿಂದ ಸುರೇಶ್ ದೇವಾಡಿಗ ಅಮಾನತು

ಉಡುಪಿ: ಕಾಪು ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ ಅನ್ನು ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದು ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.

ಕಾಪು ಪುರಸಭಾ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆಯಲ್ಲಿ ಸದಸ್ಯರಾದ ಸುರೇಶ್ ದೇವಾಡಿಗ ಅವರು ಪಕ್ಷದ ವಿಪ್ ಅನ್ನು ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದು ಈ ಹಿನ್ನಲೆಯಲ್ಲಿ ಸುರೇಶ್ ದೇವಾಡಿಗರ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಪಕ್ಷದಿಂದ ಅಮಾನತು ಮಾಡಿ ಈಗಿಂದ್ದೀಗಲೇ ಕಾರ್ಯಗತಗೊಳ್ಳುವಂತೆ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ನರಸಿಂಹ ಮೂರ್ತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love