ವಿವಿಧ ಆರು ಜಿಲ್ಲೆಗಳ ಕಾಂಗ್ರೆಸ್ ಪ್ರಮುಖ ಪ್ರತಿನಿಧಿಗಳ ಸಭೆ

Spread the love

ವಿವಿಧ ಆರು ಜಿಲ್ಲೆಗಳ ಕಾಂಗ್ರೆಸ್ ಪ್ರಮುಖ ಪ್ರತಿನಿಧಿಗಳ ಸಭೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಅಧ್ಯಕ್ಷತೆಯಲ್ಲಿ ವಿವಿಧ ಆರು ಜಿಲ್ಲೆಗಳ ಪ್ರಮುಖ ಪ್ರತಿನಿಧಿಗಳ ಸಭೆ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಬಳಿ ಇರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2018ರಲ್ಲಿ 26ರಲ್ಲಿ 22 ಸ್ಥಾನಗಳನ್ನು ಗೆದ್ದ ಬಿಜೆಪಿ ಕರಾವಳಿ ಕರ್ನಾಟಕಕ್ಕೆ ದ್ರೋಹ ಮಾಡಿದೆ. ಇಲ್ಲಿ ಬಿಜೆಪಿ ಮಾಡಿದ ‘ಕೋಮುವಾದದ ಕಾರ್ಖಾನೆ’ಯನ್ನು ‘ಸಮೃದ್ಧಿಯ ಕಾರ್ಖಾನೆ’ಯಾಗಿ ಪರಿವರ್ತಿಸಬೇಕು. ಈ ನಿಟ್ಟಿನಲ್ಲಿ ಕರಾವಳಿ, ಮಲೆನಾಡಿನ 6 ಜಿಲ್ಲೆಗಳ ಒಟ್ಟು 26 ವಿಧಾನಸಭಾ ಕ್ಷೇತ್ರಗಳಲ್ಲಿ ಫೆ. 5 ರಿಂದ “ಕರಾವಳಿ-ಮಲೆನಾಡು ಧ್ವನಿ ಯಾತ್ರೆ” ಪ್ರಾರಂಭಿಸಬೇಕು ಎಂದು ನಾಯಕರುಗಳಿಗೆ ಮಾರ್ಗದರ್ಶನ ನೀಡಿದರು.

ಈ ಸಂದರ್ಭ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರೋಜಿ ಜಾನ್, ಮಯೂರ ಜಯಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಂಸದ ಬಿ.ಇಬ್ರಾಹೀಂ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಗಂಗಾಧರ ಗೌಡ, ಮೋಟಮ್ಮ, ಮಾಜಿ ಶಾಸಕರಾದ ವೈ.ಎಸ್.ದತ್ತ, ಮೊಯ್ದೀನ್ ಬಾವ, ಶಕುಂತಲಾ ಶೆಟ್ಟಿ, ಜೆ.ಆರ್.ಲೋಬೊ, ಐವನ್ ಡಿಸೋಜಾ, ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಅಮರ್ ನಾಥ್ ಹಾಗೂ ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿ, ನಾಯಕರುಗಳು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here