ವಿವಿಧ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಭೇಟಿ  

Spread the love

ವಿವಿಧ ವಿದ್ಯಾರ್ಥಿ ನಿಲಯಗಳಿಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಭೇಟಿ  

ಮಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹಾಗೂ ಸದಸ್ಯರು ಜನವರಿ 10 ರಂದು ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ, ನಿಲಯ ನಿರ್ವಹಣೆಯ ಬಗ್ಗೆ ಪರಿಶೀಲಿಸಿದರು ಹಾಗೂ ನಿಲಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಅಧಿಕಾರಿಗಳು ವಿದ್ಯಾರ್ಥಿ ನಿಲಯದ ಹೆಚ್ಚಿನ ಮೂಲಭೂತ ಸೌಕರ್ಯಗಳ ಬಗ್ಗೆ ಆಯೋಗದ ಅಧ್ಯಕ್ಷರ ಗಮನಕ್ಕೆ ತಂದರು. ಈ ಬಗ್ಗೆ ಅಯೋಗದ ಅಧ್ಯಕ್ಷರು ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಾರ್ಪೊರೇಟರ್ ಸಂಸ್ಥೆಗಳ ಸಹಕಾರವನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಿಲಯ ನಿರ್ವಹಣೆಯ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಚಿನ್‍ಕುಮಾರ್ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಮಹಾಲಕ್ಷ್ಮಿ ಬೋಳಾರ್ ಉಪಸ್ಥಿತರಿದ್ದರು.


Spread the love