ವಿವಿಧ ಸರಗಳ್ಳತನ ಪ್ರಕರಣ; ಆರೋಪಿಯ ಬಂಧನ

Spread the love

ವಿವಿಧ ಸರಗಳ್ಳತನ ಪ್ರಕರಣ; ಆರೋಪಿಯ ಬಂಧನ

ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಕಡೆಗಳಲ್ಲಿ ನಡೆದ ಪ್ರತ್ಯೇಕ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ತೊಕ್ಕೊಟ್ಟು ಪೆರ್ಮನ್ನೂರು ನಿವಾಸಿ ಹಬೀಬ್ ಹಸನ್ ಯಾನೆ ಹಬ್ಬಿ ಯಾನೆ ಹಬೀಬ್ (39) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ 7 ಪವನ್ ತೂಕದ ಒಟ್ಟು 2 ಕರಿಮಣಿ ಸರ, 1 ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಳ್ಳಲಾದ ಸೊತ್ತುಗಳ ಮೌಲ್ಯ ರೂ 1.55 ಲಕ್ಷ ಆಗಿರುತ್ತದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


Spread the love