ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುಟ್‍ಬಾಲ್ ಪಂದ್ಯಾವಳಿ

Spread the love

ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುಟ್‍ಬಾಲ್ ಪಂದ್ಯಾವಳಿ

ಮಂಗಳೂರು: ಕ್ರೀಡಾಪಟುವಿನ ಬದುಕಿನಲ್ಲಿ ಸೋಲು ಗೆಲುವೆಂಬುವುದು ಸಹಜ. ಬದುಕಿನಂತೆ ಕ್ರೀಡೆಯಲ್ಲಿ ಬರುವ ಫಲಿತಾಂಶವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಮ್ಯಾನೇಜಿಂಗ್ ಟ್ರಸ್ಟಿ ಡಾ ವಿನಯ ಆಳ್ವಾ ತಿಳಿಸಿದರು.

ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ 2018-19 ನೇ ಸಾಲಿನ ಮಹಿಳೆಯರ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುಟ್‍ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

ಪುಟ್-ಬಾಲ್ ಆಡುವುದರಿಂದ ಕ್ರೀಡಾಪಟುಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಧೃಡರಾಗುತ್ತಾರೆ. ಜೊತೆಗೆ ಏಕಾಗ್ರತೆ ಹೆಚ್ಚಿಸಲು ಇದು ಒಂದು ಉತ್ತಮ ಕ್ರೀಡೆಯಾಗಿದೆ. ಇಂತಹ ಕ್ರೀಡೆಯ ಮೂಲಕ ಸ್ಪರ್ಧಾಳುಗಳು ಮುಂದೊಂದು ದಿನ ದೇಶವನ್ನು ಪ್ರತಿನಿಧಿಸಿ ಪದಕ ಗೆಲ್ಲುವಂತಾಗಲಿ ಎಂದು ಶುಭ ಹಾರೈಸಿದರು.

ಈ ಕ್ರೀಡಾಕೂಟದಲ್ಲಿ ಎಸ್.ಡಿ.ಎಮ್.ಕಾಲೇಜ್ ಉಜಿರೆ,ಸೆಂಟ್ ಅಲೋಶಿಯಸ್ ಕಾಲೇಜು ಮಂಗಳೂರು, ಕೆನರಾ ಕಾಲೇಜ್ ಮಂಗಳೂರು ಹೀಗೆ 5 ಕಾಲೇಜಿನ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಜಯಪ್ರಕಾಶ ಸ್ವಾಗತಿಸಿ , ಪೂಜಾ ವಂದಿಸಿದರು.

ಸಮಾರೋಪ: ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಅಭಿನಂದನ್ ಶೆಟ್ಟಿ ಮಾತನಾಡಿ ಕೀಡೆಯಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚಿನ ಆಸಕ್ತಿ ವಹಿಸಿ ಮುಂದುವರಿದರೆ ಉನ್ನತ ಸ್ಥಾನ ಗಳಿಸಲು ಸಾಧ್ಯ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಕ ಪ್ರವೀಣ್ ಕುಮಾರ್ ಮಾತನಾಡಿ ಮುಂದಿನ ದಿನಗಳಲ್ಲಿ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಸ್ಪರ್ಧಿಸುವಂತಾಗಲಿ ಎಂದು ಹಾರೈಸಿದರು. ವಿದ್ಯಾರ್ಥಿನಿ ಸಂಧ್ಯಾ ನಿರೂಪಿಸಿದರು.


Spread the love