Home Mangalorean News Kannada News ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಡಾ.ಮುಸ್ತಫಾ ಬಸ್ತಿಕೋಡಿ ನೇಮಕ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಡಾ.ಮುಸ್ತಫಾ ಬಸ್ತಿಕೋಡಿ ನೇಮಕ

Spread the love

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾಗಿ ಡಾ.ಮುಸ್ತಫಾ ಬಸ್ತಿಕೋಡಿ ನೇಮಕ

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಮುಸ್ತಫಾ ಬಸ್ತಿಕೋಡಿ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) 9ನೇ ಅಕಾಡೆಮಿಕ್ ಸೆನೆಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

VTU ಕಾಯಿದೆ 1994ರ ಸೆಕ್ಷನ್ 22ರ ಅಡಿಯಲ್ಲಿ ಈ ಕುರಿತು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿಗಳು ತಿಳಿಸಿದ್ದಾರೆ.

ಅಕಾಡೆಮಿಕ್ ಸೆನೆಟ್ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅತ್ಯುನ್ನತ ಶೈಕ್ಷಣಿಕ ಪ್ರಾಧಿಕಾರವಾಗಿ ಕಾರ್ಯನಿರ್ವಹಿಸುತ್ತದೆ. ಪ್ರಮುಖ ಶೈಕ್ಷಣಿಕ ಕಾರ್ಯತಂತ್ರಗಳು ಮತ್ತು ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಡಾ. ಮುಸ್ತಫಾ ಬಸ್ತಿಕೋಡಿ ಅವರನ್ನು ಸೆನೆಟ್‌ನಲ್ಲಿ ಸೇರಿಸಿಕೊಂಡಿರುವುದು ತಾಂತ್ರಿಕ ಶಿಕ್ಷಣ, ಸಂಶೋಧನೆ ಮತ್ತು ಶೈಕ್ಷಣಿಕ ಆಡಳಿತಕ್ಕೆ ಅವರು ನೀಡಿರುವ ಕೊಡುಗೆಗಳಿಗೆ ಸಂದ ಗೌರವವಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Spread the love

Exit mobile version