ವಿಶ್ವ ಬಂಟರ ಸಮ್ಮಿಲನ -2018 ರ ಆಹ್ವಾನ ಪತ್ರಿಕೆ ಬಿಡುಗಡೆ

Spread the love

ವಿಶ್ವ ಬಂಟರ ಸಮ್ಮಿಲನ -2018 ರ ಆಹ್ವಾನ ಪತ್ರಿಕೆ ಬಿಡುಗಡೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಉಡುಪಿ ಜಿಲ್ಲೆಯ ಸಮಸ್ತ ಬಂಟರ ಸಂಘಗಳ ಸಹಯೋಗದಲ್ಲಿ ಸೆಪ್ಟೆಂಬರ್ 9ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ವಿಶ್ವ ಬಂಟರ ಸಮ್ಮಿಲನ -2018 ರ ಆಹ್ವಾನ ಪತ್ರಿಕೆಯನ್ನು ಗುರುವಾರ ಬಿಡುಗಡೆಗೊಳಿಸಲಾಯಿತು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಿಡುಗಡೆಗೊಳಿಸಿ, ವಿಶ್ವಮಟ್ಟದ ಸಮಸ್ತ ಬಂಟರನ್ನು ಒಗ್ಗೂಡಿಸಿ ವಿಶ್ವಬಂಟರ ಸಮ್ಮಿಲನವನ್ನು ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಲಿದ್ದು, ಅವರ ಜೊತೆಯಲ್ಲಿ ಬಾಲಿವುಡ್ ಹಾಗೂ ಕನ್ನಡ ಚಿತ್ರರಂಗದ ಬಹಳಷ್ಟು ತಾರೆಯರು ಸಹ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ವಿಶ್ವದಾದ್ಯಂತ ಇರುವ ಸುಮಾರು 15000 ಬಂಟರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಆಮಂತ್ರಣ ಪತ್ರಿಕೆ ಬಿಡುಗಡೆ ವೇಳೆ ಸಮ್ಮೇಳನ ಸಮಿತಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಒಕ್ಕೂಟದ ಕಾರ್ಯದರ್ಶಿ ವಿಜಯ ಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸಮ್ಮೇಳನದ ಸಂಚಾಲಕ ಕಾಪು ಲೀಲಾಧರ ಶೆಟ್ಟಿ, ಬಂಟರ ಸಂಘದ ಮೋಹನ್ ಶೆಟ್ಟಿ, ವೀಣಾ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love