ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ

Spread the love

ವಿಶ್ವ ಬಂಟರ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕೂಟದಿಂದ ಆಹ್ವಾನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅಕ್ಟೋಬರ್ 28 ಮತ್ತು 29 ರಂದು ವಿಶ್ವ ಬಂಟರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮಕ್ಕೆ ಬರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಆಮಂತ್ರಿಸಿದರು.

ಒಕ್ಕೂಟದಿಂದ ದಿನಾಂಕ 28.10.2023 ಮತ್ತು 29.10.2023 ರಂದು ಉಡುಪಿಯಲ್ಲಿ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಜರಗಲಿದ್ದು, ಈ ಹಿನ್ನೆಲೆಯಲ್ಲಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬೆಂಗಳೂರಿನಲ್ಲಿರುವ ಮುಖ್ಯಂಮತ್ರಿಯವರ ನಿವಾಸಕ್ಕೆ ತೆರಳಿ ಅವರನ್ನು ಆಹ್ವಾನಿಸಿದರು.

ಸಿದ್ದರಾಮಯ್ಯ ರವರು ಒಕ್ಕೂಟದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವ ರಮಾನಾಥ್ ರೈ, ನದ್ಯoಪ್ಪ ಶೆಟ್ಟಿ ಗೌ. ಕಾರ್ಯದರ್ಶಿ ಬಂಟರ ಸಂಘ ಮೈಸೂರು, ಒಕ್ಕೂಟದ ನಿರ್ದೇಶಕ ಅಶೋಕ್ ಶೆಟ್ಟಿ ಬೆಳ್ಳಾಡಿ, ಪೋಷಕರಾದ ಗಿರೀಶ್ ಶೆಟ್ಟಿ ತೆಳ್ಳರ್, ಚಂದ್ರಹಾಸ್ ಶೆಟ್ಟಿ ರಂಗೋಲಿ, ಉಪೇಂದ್ರ ಶೆಟ್ಟಿ ಬೆಂಗಳೂರು, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ದೇವಿಪ್ರಸಾದ್ ಶೆಟ್ಟಿ, ದಿನಕರ್ ಶೆಟ್ಟಿ ಬೆಳ್ಳಾಡಿ, ಪ್ರವೀಣ್ ಶೆಟ್ಟಿ, ಭೋಜರಾಜ್ ಶೆಟ್ಟಿ, ಮಧುಕರ್ ಶೆಟ್ಟಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here