ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ – ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Spread the love

ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ – ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ ಬದಲಾಗಿ ಅದೊಂದು ನೊಂದಣಿಯಾಗಿರುವ ಸಂಸ್ಥೆಯಾಗಿದ್ದು ನೊಂದವಣೆಗೆ ಅದರದ್ದೆಯಾದ ನೀತಿ ನಿಯಮಾವಳಿಗಳು ಇದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಅವರು ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನುಇದ್ದು, ನಮಗೆ ಸಂವಿಧಾನವೇ ಅಧಿಕಾರ ಕೊಟ್ಟಿದೆ. ಹಣದ ವಿಚಾರದಲ್ಲಿ ಪಾರರ್ದಶಕತೆ ಖಂಡಿತವಾಗಿ ಬೇಕೆ ಬೇಕು ಯಾರೇ ಆದರೂ ಸಂಶಯಗಳನ್ನು ಮುಂದೆ ಇಟ್ಟರೆ ಸೂಕ್ತ ಪರಿಹಾರ ಕಂಡುಕೊಳ್ಳಬಹುದು. ಟ್ರಸ್ಟ್ ನಲ್ಲಿ ಮುಚ್ಚು ಮರೆಯ ಯಾವುದೆ ವಿಷಯಗಳು ನಡೆಯುದಿಲ್ಲ ಆಡಿಟ್ ಆಗಿ ಅದಕ್ಕೆ ಬೇಕಾಗಿರುವಂತ ಪುರಾವೆಗಳನ್ನು ಕೊಡಲು ಸಾಧ್ಯವಿದೆ ಹಾಗಾಗಿ ಯಾವುದೆ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು.

ರಾಮ ಜನ್ಮಭೂಮಿ ಟ್ರಸ್ಟ್ ನಂತೆ ಅಧಿಕೃತವಾಗಿರುವ ವಿಶ್ವ ಪರಿಷತ್ ಕಾರ್ಯಕರ್ತರು ದೇಣಿಗೆ ಸಂಗ್ರಹ ಮಾಡುತ್ತಿದ್ದಾರೆ. ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರಿಗೆ ದೇಣಿಗೆ ಸಂಗ್ರಹ ದ ಜವಾಬ್ದಾರಿ ನೀಡಲಾಗಿದೆ. ವಿಹಿಂಪ ನ ಮುಖ್ಯಸ್ಥ ಆಯಾ ಊರಿನಲ್ಲಿ ಸಂಗ್ರಹ ನಿರತರಾಗಿದ್ದಾರೆ. ಹಿರಿಯ, ಮುಂದಾಳುಗಳ ನೇತೃತ್ವದಲ್ಲಿ ಕಾರ್ಯಕರ್ತರಯ ನಿಧಿ ಸಂಗ್ರಹ ಮಾಡುತ್ತಿದ್ದಾರೆ. ವಿಹಿಂಪ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ ಹಾಗಾಗಿ ಇಂತಹ ಮಾತು ಬಳಸುವುದು ಯುಕ್ತವಲ್ಲ, ಸಂಶಯಕ್ಕೆ ಪರಿಹಾರ ಇದೆ. ಸಂಶಯ ಇದೆ ಎಂದು ಅರೋಪ ಮಾಡಿದರೆ, ಆರೋಪದಲ್ಲಿಯೇ ಮುಗಿಯುತ್ತದೆ ಆರೋಪ ಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ, ಪ್ರಶ್ನೆ ಮಾಡಿದರೆ ಉತ್ತರ ಕೊಡಬಹುದು ಎಂದರು.

ರಾಮನ ಹೆಸರಿನಲ್ಲಿ ಪಾರದರ್ಶಕತೆ ಇಟ್ಟುಕೊಳ್ಳದೆ ಯಾರೋ ಬೀದಿ ಬೀದಿಯಲ್ಲಿ ಪೋಲಿ ಪುಂಡರು ಹಣ ಸಂಗ್ರಹ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು.


Spread the love