ವೀಕೆಂಡ್ ಕರ್ಫ್ಯೂ: ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಬಸ್‌ ಸಂಚಾರಕ್ಕೆ ಅವಕಾಶವಿಲ್ಲ

Spread the love

ವೀಕೆಂಡ್ ಕರ್ಫ್ಯೂ: ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಬಸ್‌ ಸಂಚಾರಕ್ಕೆ ಅವಕಾಶವಿಲ್ಲ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಶುಕ್ರವಾರದಿಂದ ಅನ್ವಯಿಸಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಅನ್‌ಲಾಕ್‌ಗೆ ಆದೇಶ ಮಾಡಲಾಗಿದ್ದರೂ, ವೀಕೆಂಡ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ಆದರೆ ಅಗತ್ಯ ವಸ್ತುಗಳ ಅಂಗಡಿಗಳು ಶನಿವಾರ ಮತ್ತು ರವಿವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆದಿರಲಿವೆ. ಉಳಿದ ಯಾವುದೇ ಅಂಗಡಿಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ವೀಕೆಂಡ್ ಕರ್ಫ್ಯೂ ಅವಧಿಯಲ್ಲಿ ಮನೆ ಸಮೀಪದ ಅಂಗಡಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾನ್ಹ 2 ಗಂಟೆಯವರೆಗೆ ಹಾಗೂ ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.


Spread the love