ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ: ಥಾವರಚಂದ್ ಗೆಹ್ಲೋಟ್

Spread the love

ವೃತ್ತಿ ಕೌಶಲ್ಯದಿಂದ ಯಶಸ್ಸು ಸಾಧ್ಯ: ಥಾವರಚಂದ್ ಗೆಹ್ಲೋಟ್

ಬೆಂಗಳೂರು: ಕಲಿತ ವಿದ್ಯೆಯು ಬದುಕಿನಲ್ಲಿ ಶಾಶ್ವತವಾಗಿರುತ್ತದೆ. ಇಂದಿನ ತಂತ್ರಜ್ಞಾನ ಯುಗದಲ್ಲಿ ಅಗತ್ಯ ಕೌಶಲವನ್ನು ಗಳಿಸಬೇಕು. ಯಾವುದೇ ಕ್ಷೇತ್ರವಿರಲಿ ಕೌಶಲದಿಂದ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಆದ್ದರಿಂದ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಪ್ರಯತ್ನಿಸಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹೇಳಿದರು.

ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿ, ವಿದ್ಯೆಯು ನಮ್ಮ ಹಾಗೂ ಸಮಾಜದ ಏಳ್ಗೆಗೆ ಬಳಕೆಯಾಗಬೇಕು. ಸಹೋದರತೆ ಭಾವದೊಂದಿಗೆ ನಾವೆಲ್ಲರೂ ಒಟ್ಟಾಗಿ ಮುನ್ನಡೆಯಬೇಕು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವು ಪ್ರಪ್ರಥಮವಾಗಿ ಅನುಷ್ಠಾನಗೊಳಿಸಿದೆ. ದೇಶದ ಯುವಸಮುದಾಯದ ಅಭಿವೃದ್ಧಿಗೆ ಪೂರಕವಾಗಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯವನ್ನು ಮತ್ತಷ್ಟು ಬಲಪಡಿಸುವುದರ ಜತೆಗೆ ಸ್ವಾತಂತ್ರ್ಯದ ಶತಮಾನೋತ್ಸವ ವೇಳೆಗೆ ಭಾರತವನ್ನು ಜಗತ್ತಿನ ಅತ್ಯಂತ ಬಲಿಷ್ಠ ದೇಶವಾಗಿ ಹೊರಹೊಮ್ಮಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.

ಸರಕಾರದ ಯೋಜನೆಗಳ ಸಹಭಾಗಿತ್ವದಿಂದ ಮಾತ್ರ ಅಭಿವೃದ್ಧಿ ಸಾಧ್ಯ. ಕಳೆದ 75 ವರ್ಷಗಳಲ್ಲಿ ಇದು ಸಾಬೀತಾಗಿದೆ. ನವ ಪದವೀಧರರು ಮುಂಬರುವ ದಿನಗಳಲ್ಲಿ ಕ್ರೀಡೆ ಮತ್ತು ಕಲಾಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿ ಇರಬೇಕು. ಪರಿಸರ ಮಾಲಿನ್ಯ ಮತ್ತು ಅಸಮತೋಲನ ನಿರ್ವಹಣೆಗಾಗಿ ನಿರಂತರ ಪ್ರಯತ್ನ ಮಾಡಬೇಕು ಎಂದರು.

ರಾಣಿ ಚೆನ್ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಅತೀ ದೊಡ್ಡ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ವಿವಿ ತನ್ನ ಮೂಲ ಉದ್ಧೇಶದ ಈಡೇರಿಕೆ ನಿಟ್ಟಿನಲ್ಲಿ ಫಲಪ್ರದ ಹೆಜ್ಜೆಗಳನ್ನು ಇಡುತ್ತಿದೆ ಎಂದು ಹೇಳಿದರು.

ಗೌರವ ಡಾಕ್ಟರೇಟ್ ಪದವಿ ಪುರಸ್ಕøತರನ್ನು ಅಭಿನಂದಿಸಿದ ಅವರು, ಮುಂಬರುವ ದಿನಗಳಲ್ಲಿ ತಮ್ಮ ಸೇವೆಯನ್ನು ಇದೇ ರೀತಿ ಮುಂದುವರಿಸಬೇಕು ಎಂದರು. ಪದವೀಧರರನ್ನು ಕೂಡ ಅಭಿನಂದಿಸಿದ ಅವರು, ಶಿಕ್ಷಣ ಮತ್ತು ನೈತಿಕಮೌಲ್ಯವು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲಿ ಎಂದು ಹಾರೈಸಿದರು.

ವಿವಿ ಧ್ಯೇಯವಾಕ್ಯ ಗಮನದಲ್ಲಿಟ್ಟುಕೊಂಡು ಜೀವನಪಯರ್ಂತ ವಿದ್ಯಾರ್ಥಿಯಾಗಿ ಜ್ಞಾನಾರ್ಜನೆ ಮಾಡುವುದರ ಜತೆಗೆ ಗಳಿಸಿದ ಜ್ಞಾನವನ್ನು ಧಾರೆಯರಿಯುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ ಅವರು ಪ್ರಾಸ್ತಾವಿಕ ನುಡಿಗಳಲ್ಲಿ ಪ್ರಸಕ್ತ ವರ್ಷದಲ್ಲಿ 27 ಪಿಎಚ್.ಡಿ; 2611 ಸ್ನಾತಕೋತ್ತರ ಮತ್ತು 44,498 ಸ್ನಾತಕ ಪದವಿಗಳನ್ನು ನೀಡಲಾಗುತ್ತಿದೆ ಇದರೊಂದಿಗೆ 11 ಬಂಗಾರದ ಪದಕಗಳು ಮತ್ತು 149 ಯಾರ್ಂಕ್ ಗಳನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.

ಸಮಾಜಸೇವೆಗಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿ ಅವರಿಗೆ (ಮರಣೋತ್ತರ) “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಹಾಗೂ ಪೆÇ್ರೀ. ಮಲ್ಲೇಪುರಂ ಜಿ. ವೆಂಕಟೇಶ್ ಅವರಿಗೆ “ಡಾಕ್ಟರ್ ಆಫ್ ಲೆಟರ್ಸ್” ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಸಂಸದರೂ ಆಗಿರುವ ಮಂಗಳ ಸುರೇಶ್ ಅಂಗಡಿ ಅವರು ದಿ.ಸುರೇಶ್ ಅಂಗಡಿ ಅವರಿಗೆ ವಿಶ್ವವಿದ್ಯಾಲಯ ವತಿಯಿಂದ ಘೋಷಿಸಲಾದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

ಘಟಿಕೋತ್ಸವದಲ್ಲಿ ಒಟ್ಟು 47,185 ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ 11 ಸ್ವರ್ಣ ಪದಕಗಳು, 27 ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಯಿತು.

ಘಟಿಕೋತ್ಸವದಲ್ಲಿ ವಿಶ್ರಾಂತ ಕುಲಪತಿ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಮಾಜಿ ಉಪಾಧ್ಯಕ್ಷರಾದ ಡಾ.ಬಿ.ತಿಮ್ಮೇಗೌಡ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಾದ ರಾಜಶ್ರೀ ಜೈನಾಪುರ, ಕುಲಸಚಿವರು(ಮೌಲ್ಯಮಾಪನ) ಪ್ರೊ.ಶಿವನಾಂದ ಗೊರನಾಳೆ, ಹಣಕಾಸು ಅಧಿಕಾರಿಗಳಾದ ಪ್ರೊ. ಎಸ್.ಬಿ.ಆಕಾಶ, ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿವಿಧ ವಿಭಾಗಗಳ ಡೀನ್, ವಿಭಾಗ ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಪಾಲಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


Spread the love