ವೇಶ್ಯಾವಾಟಿಕೆ ನಡೆಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಮಣಿಪಾಲ ಪೊಲೀಸರಿಂದ ದಾಳಿ

Spread the love

ವೇಶ್ಯಾವಾಟಿಕೆ ನಡೆಸುತ್ತಿದ್ದ ಅಪಾರ್ಟ್ ಮೆಂಟ್ ಗೆ ಮಣಿಪಾಲ ಪೊಲೀಸರಿಂದ ದಾಳಿ

ಉಡುಪಿ: ವೇಶ್ಯಾವಾಟಿಕೆ ನಡೆಯುತ್ತಿದ್ದ ಅಪಾರ್ಟ್ ಮೆಂಟ್ ಗೆ ಮಣಿಪಾಲ ಪೊಲೀಸರು ದಾಳಿ ನಡೆಸಿದ ಕುರಿತು ವರದಿಯಾಗಿದೆ.

ಹೆರ್ಗಾ ಗ್ರಾಮದ ಈಶ್ವರ ನಗರ ಮಹಾಲಸಾ ಎಮರಾಲ್ಡ್ ಅಪಾರ್ಟ್ ಮೆಂಟ್ ನಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಮಣಿಪಾಲ ಪೊಲೀಸ್ ನೀರಿಕ್ಷಕರಾದ ದೇವರಾಜ್ ಟಿವಿ ಅವರು ದಾಳಿ ನಡೆಸಿದ್ದು ಈ ವೇಳೆ ನಡೆಸಿದಲ್ಲಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ವಿಚಾರಿಸಿ ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅನೈತಿಕ ಚಟುವಡಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಅನೈತಿಕ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಅಪಾದಿತರಾದ ಪಯಾಜ್ ಮತ್ತು ಸಚಿನ್ ದಾಳಿಯ ಸಮಯ ಸ್ಥಳದಿಂದ ಪರಾರಿಯಾಗಿರುತ್ತಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love