ವೈಜ್ಞಾನಿಕ ರೀತಿಯ ಮೀನುಗಾರಿಕೆಗೆ ಸಚಿವ ಎಸ್. ಅಂಗಾರ ಸಲಹೆ 

Spread the love

ವೈಜ್ಞಾನಿಕ ರೀತಿಯ ಮೀನುಗಾರಿಕೆಗೆ ಸಚಿವ ಎಸ್. ಅಂಗಾರ ಸಲಹೆ 

ಮಂಗಳೂರು: ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕ ರೀತಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಲ್ಲೀ ಉತ್ತಮ ಲಾಭ ಗಳಿಸಬಹುದು ಮೀನುಗಾರಿಕೆ, ಬಂದರು ಮತ್ತು ಒಳನಾಡು  ಜಲಸಾರಿಗೆ  ಸಚಿವರಾದ ಎಸ್. ಅಂಗಾರ ಅವರು ಸಲಹೆ ನೀಡಿದರು.

ಅವರು ಜ.13ರ ಶುಕ್ರವಾರ ಸುಳ್ಯ ತಾಲ್ಲೂಕಿನ ಗೌಡ ಸಮುದಾಯ ಭವನದಲ್ಲಿ ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಹಾಗೂ ಫ್ರೀಡಂ ಆ್ಯಪ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಮೀನುಗಾರರ ಆದಾಯವನ್ನು ದ್ವಿಗುಣಗೊಳಿಸಲು ಹಾಗೂ ಆರ್ಥಿಕ ಭದ್ರತೆ ನೀಡಲು ಮತ್ಸ್ಯ ಸಂಪದ ಯೋಜನೆಯಡಿ ಮೀನು ಕೃಷಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡಿದ್ದು,  ತಾಲೂಕು, ಗ್ರಾಮಮಟ್ಟದಲ್ಲಿ ಮೀನುಗಾರಿಕೆಯಲ್ಲಿ ಆಸಕ್ತಿ ಇರುವ ರೈತರನ್ನು ಗುರುತಿಸಿ ಅವರನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಾನ್ಮುಖವಾಗಿದೆ. ಆ ದಿಸೆಯಲ್ಲಿ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಈ ಭಾಗದಲ್ಲಿ ಮಡಂಜಿ ಮತ್ತು ಮಲಂಜಿ ಮೀನುಗಳನ್ನು ಉತ್ಪಾದನೆ ಮಾಡಲು ಹೆಚ್ಚಿನ ಒತ್ತು ನೀಡಲಾಗಿದ್ದು, ಈ ಮೀನಿನ ತಳಿಯನ್ನು ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗಿದೆ.   ಮಡಂಜಿ ಮತ್ತು ಮಲಂಜಿ ಮೀನುಗಳಿಗೆ ಔಷಧಿಯ ಗುಣಗಳಿದ್ದು, ಇದು ಹೆಚ್ಚಿನ ಲಾಭದಾಯಕ ಮೀನುಗಳಾಗಿವೆ, ಇದರ ಉತ್ಪಾದನೆಯಲ್ಲಿ ಈ ಭಾಗದ ರೈತರು ಹೆಚ್ಚಾಗಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಕರೆ ನೀಡಿದರು.

ಮೀನುಗಾರಿಕೆ ಅಭಿವೃದ್ಧಿ ನಿಗಮದ ಕಡೆಯಿಂದ ಮೀನುಗಾರರಿಗೆ ಮೀನು ಖರೀದಿಗೆ ಕ್ರಮವಹಿಸಲಾಗಿದೆ. ಇದರಲ್ಲಿ ಮಧ್ಯವರ್ತಿಗಳ ಹಾವಳಿ ಇರುವುದಿಲ್ಲ ನೇರವಾಗಿ ಮೀನು ಹಿಡಿಯುವರಿಂದ ಮೀನು ಖರೀದಿಸಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷÀ ಎ.ವಿ. ತೀರ್ಥರಾಮ ಮಾತನಾಡಿ, ಈ ಭಾಗದಲ್ಲಿ ರೈತರು ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ತಮ್ಮ ಅಡಿಕೆ ತೋಟದಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ಮೀನು ಸಾಕಾಣಿಕೆ ಮಾಡಬಹುದಾಗಿದೆ. ಅಡಿಕೆ ಬೆಳೆಯೊಂದಿಗೆ ಮೀನು ಸಾಕಾಣಿಕೆ ಮೂಲಕ ಆರ್ಥಿಕವಾಗಿ ಸಫಲರಾಗಬಹುದಾಗಿದೆ. ಮೀನು ಸಾಕಾಣಿಕೆಯು ಉದ್ಯೋಗವೆಂದು ಭಾವಿಸಿ ಅದರಲ್ಲಿ ತೊಡಗಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಮೀನುಗಾರಿಕೆ ನಿರ್ದೇಶಕರಾದ ರಾಮಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸುಳ್ಯ ಮತ್ತು ಪುತ್ತೂರು ಭಾಗದಲ್ಲಿ ಅಡಿಕೆ ಪ್ರಮುಖ ಬೆಳೆಯಲಾಗುತ್ತಿದೆ. ಅದರೊಂದಿಗೆ ರೈತರು ತಮ್ಮ ತೋಟದಲ್ಲಿ ಕೆರೆ ಹಾಗೂ ಕೃಷಿ ಹೊಂಡಗಳನ್ನು ನಿರ್ಮಿಸಿರುವುದರಿಂದ ಅಂತಹ ಕೃಷಿಕರಿಗೆ ಆಧುನಿಕ ಮೀನುಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ದೇಶದಲ್ಲಿಯೇ ಕರ್ನಾಟಕ ರಾಜ್ಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅನುμÁ್ಠನದಲ್ಲಿ ಮೊದಲ ಸ್ಥಾನದಲ್ಲಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಕೃಷಿ ಮಾಡುವ ರೈತರಿಗೆ ಕೊಳ ನಿರ್ಮಾಣ ಮಾಡಲು ಸಹಾಯಧನ ನೀಡಲಾಗುತ್ತದೆ  ಸದುಪಯೋಗವನ್ನು  ರೈತರು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಈ ಕಾರ್ಯಗಾರದಲ್ಲಿ ರೈತರಿಗೆ 15 ಸಾವಿರ ಮೀನು ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದರು.

ಮೀನುಗಾರಿಕೆ ಇಲಾಖೆ ವತಿಯಿಂದ ಇದೇ ವೇಳೆ ಸಚಿವರಿಗೆ ಸನ್ಮಾನಿಸಲಾಯಿತು. ಅರ್ಹ ರೈತರಿಗೆ ಮೀನು ಮರಿಗಳನ್ನು ಸಚಿವರು ವಿತರಿಸಿದರು.

ಮೀನುಗಾರಿಕೆ ನಿರ್ದೇಶನಾಲಯದ ಅಪರ ನಿರ್ದೇಶಕರಾದ (ಕರಾವಳಿ) ದಿನೇಶ್ ಕುಮಾರ್, ಮೀನುಗಾರಿಕೆ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಶಿವಕುಮಾರ ಮಗದ,  ಫ್ರೀಡಂ ಆಪ್ ಸಂಸ್ಥಾಪಕರಾದ ಸುಧೀರ್,  ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸುಶ್ಮಿತ ರಾವ್, ಸಹಾಯಕ ನಿರ್ದೇಶಕರಾದ ದಿಲೀಪ ಕುಮಾರ್, ರೈತರು, ಕಾಲೇಜು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.


Spread the love

Leave a Reply

Please enter your comment!
Please enter your name here