ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ರೂ. ವಂಚನೆ; ಆರೋಪಿಯ ಬಂಧನ
ಮಂಗಳೂರು: ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ಲಕ್ಷ ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್ಗಳು ಹಾಗೂ ರೂ. 20,300 ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.1,60,300 ಆಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.













