
Spread the love
ವ್ಯಾಪಕ ಮಳೆ: ಜುಲೈ 7 ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜು.7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ನೀರು ನಿಲ್ಲುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಕೈಗೊಳ್ಳಬೇಕು. ದ.ಕ ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ.
Spread the love