ಶಕ್ತಿ ಯೋಜನೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್

Spread the love

ಶಕ್ತಿ ಯೋಜನೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್

ಮಂಗಳೂರು:  ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ಶಕ್ತಿಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜು.11ರ ಭಾನುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಇವತ್ತಿನಿಂದ ಎಲ್ಲ ಸರಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ವಿದ್ಯಾರ್ಥಿನಿಯರಿಗೆ ಪ್ರಯಾಣ ಉಚಿತವಾಗಿರುತ್ತದೆ.ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಸೌಲಭ್ಯದೊಂದಿಗೆ ಅವರಿಗೆ ಹೆಚ್ಚಿನ ಶಕ್ತಿ, ಪ್ರೋತ್ಸಾಹ, ಧೈರ್ಯ ತುಂಬಿದಂತಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಜೈನ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗದ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.


Spread the love