ಶಾಲಾ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ  ಖಂಡಿಸಿ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ

Spread the love

ಶಾಲಾ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ  ಖಂಡಿಸಿ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆಗೆ ಕರೆ

ಮಂಗಳೂರು: ವಿಜಯಪುರ ನಗರದಲ್ಲಿ   ಬಾಲಕಿ ದಾನೇಶ್ವರಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ ತೀವ್ರವಾಗಿ ಖಂಡಿಸುತ್ತದೆ. ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ರಾಜ್ಯ ಸರ್ಕಾರ ಮತ್ತು ಗೃಹ ಇಲಾಖೆಯನ್ನು ಆಗ್ರಹಿಸಿದೆ.

ಘಟನೆಯ ಕುರಿತು ಪೋಲಿಸರಿಗೆ ದೂರು ನೀಡಲು ತೆರಳಿದಾಗ ಅಲ್ಲಿರುವ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಮೃತ ಬಾಲಕಿಯ ಶವವನ್ನುಇಟ್ಟುಕೊಂಡು ಅಹೋ ರಾತ್ರಿಯವರಗೂ ಸ್ಥಳದಲ್ಲಿಯೇ ಧರಣಿಯನ್ನು ಸಹ ನಡೆಸಿದರು ಯಾವೊಬ್ಬ ಅಧಿಕಾರಿಯು ಪೋಷಕರದೂರನ್ನು ದಾಖಲಿಸಿಕೊಂಡಿಲ್ಲ. ರಾಜ್ಯದ ಮುಖ್ಯಮಂತ್ರಿಗಳ ಪ್ರವಾಸದ ನೆಪವನ್ನು ಒಡ್ಡಿ ಈಡೀ ಪ್ರಕರಣವನ್ನು ಮುಚ್ಚಿ ಹಾಕಲು ವಿಜಯಪುರ ಎಸ್ಪಿ ಅವರು ಪ್ರಯತ್ನವನ್ನು ನಡೆಸುತ್ತಿದ್ದಾರೆ. ಆದ್ದರಿಂದ ಈ ಪ್ರಕರಣದ ದೂರನ್ನು ದಾಖಲಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಮೃತ ಬಾಲಕಿಯ ಮೇಲೆ ನಡೆದ ಅತ್ಯಾಚಾರದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಎಬಿವಿಪಿ ಆಗ್ರಹಿಸಿದೆ.


Spread the love