ಶಾಸಕ ಕಾಮತ್ ರಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್ ವಿತರಣೆ

Spread the love

ಶಾಸಕ ಕಾಮತ್ ರಿಂದ ಉತ್ತಮ ಗುಣಮಟ್ಟದ ಹೆಲ್ಮೆಟ್ ವಿತರಣೆ

ಮಂಗಳೂರು: ಸಾಮಾಜಿಕ ಜಾಗೃತಿಯನ್ನು ಹೆಚ್ಚಿಸುವ ಪ್ರಯತ್ನದ ಅಂಗವಾಗಿ ಸೋಮವಾರ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಐಎಸ್ ಐ ಗುಣಮಟ್ಟದ ಹೆಲ್ಮೆಟ್ ಅನ್ನು ದ್ವಿಚಕ್ರ ವಾಹನ ಸವಾರರಿಗೆ ವಿತರಿಸಿದರು.

ಈ ಬಗ್ಗೆ ಮಾತನಾಡಿದ ಶಾಸಕರು ಫೆಬ್ರವರಿಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಗುತ್ತದೆ. ಈಗಾಗಲೇ ತಾವು ಆರಂಭಿಸಿರುವ ಪ್ರತಿ ಬುಧವಾರ ನೋ ಹಾರ್ನ್ ಡೇ ಅಭಿಯಾನ ನಾಗರಿಕರ ಸಹಕಾರದಿಂದ ಯಶಸ್ಸನ್ನು ಪಡೆದುಕೊಳ್ಳುತ್ತದೆ. ಅದೇ ಅಭಿಯಾನದ ಮುಂದುವರೆದ ಅಂಗವಾಗಿ ಜನಜಾಗೃತಿ ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನ ಸವಾರರು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸುವ ಅಗತ್ಯ ಇದೆ. ಇದರಿಂದ ಅಪಘಾತಗಳಾಗುವಾಗ ಹೆಚ್ಚಿನ ಹಾನಿಯನ್ನು ತಪ್ಪಿಸಬಹುದು. ಆದ್ದರಿಂದ ಈ ಬಗ್ಗೆ ಅರಿವು ಮೂಡಿಸುವ ಕೆಲಸ ನಡೆದಿದೆ. Rapido ಎಂಬ ಸಂಸ್ಥೆ ಸಾಮಾಜಿಕ ಬದ್ಧತಾ ನಿಧಿಯಲ್ಲಿ ಈ ಕಾರ್ಯಕ್ಕೆ ಕೈ ಜೋಡಿಸಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಕಾಮತ್ ತಿಳಿಸಿದರು


Spread the love